ನಾಪೋಕ್ಲು, ಅ. ೨: ಮಕ್ಕಳ ಅಪೌಷ್ಟಿಕತೆ ದೂರ ಮಾಡಲು ಗುಣಮಟ್ಟದ ಆಹಾರ ನೀಡುವಂತಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಇಲಾಖೆಯ ಪ್ರಬಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೀತಾ ಲಕ್ಷಿö್ಮ ಹೇಳಿದರು.

ರಾಷ್ಟಿçÃಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ನಾಪೋಕ್ಲುವಿನ ಹಳೆ ತಾಲೂಕು ಅಂಗನವಾಡಿ ಕೇಂದ್ರದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಪೋಷಣ ಅಭಿಯಾನ ಮಾಸಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇತ್ತೀಚಿನ ದಿನಗಳ ಜೀವನ ಶೈಲಿಯಲ್ಲಿನ ಬದಲಾವಣೆ, ಗುಣಮಟ್ಟದ ಆಹಾರ ಪಡೆಯದಿರುವುದು ಅಪೌಷ್ಟಿಕತೆಗೆ ಕಾರಣ ಎಂದರು. ಆದ್ದರಿಂದ ಸರ್ಕಾರದಿಂದ ಪ್ರತೀ ಮೂರು ತಿಂಗಳಿಗೊಮ್ಮೆ ಮಕ್ಕಳ ಆರೋಗ್ಯ ತಪಾಸಣೆ ನಡೆಯುತ್ತಿದ್ದು, ಆ ನಿಟ್ಟಿನಲ್ಲಿ ಮಕ್ಕಳ ಆರೋಗ್ಯ ತಪಾಸಣೆ ಮಾಡಿಸಿ ಅಪೌಷ್ಟಿಕತೆ ತಡೆಯಬೇಕು ಎಂದರು. ಅಪೌಷ್ಟಿಕತೆಯು ರೋಗ ನಿರೋಧಕ ಶಕ್ತಿಯನ್ನು ಕಡಿಮೆ ಮಾಡುತ್ತದೆ. ರೋಗಕ್ಕೆ ಒಳಗಾಗುವ ಸಾಧ್ಯತೆಯನ್ನು ಹೆಚ್ಚಿಸುತ್ತದೆ. ದೈಹಿಕ ಮತ್ತು ಮಾನಸಿಕ ಬೆಳವಣಿಗೆಯನ್ನು ದುರ್ಬಲಗೊಳಿಸುತ್ತದೆ. ಸಮತೋಲಿತ ಆಹಾರವಾದ ಹಸಿರು ಎಲೆಯುಕ್ತ ತರಕಾರಿ ಮತ್ತು ಹಣ್ಣುಗಳು, ಬೇಳೆ ಕಾಳುಗಳು, ಏಕದಳ ಮತ್ತು ದ್ವಿದಳ ಧಾನ್ಯಗಳು, ಶೇಂಗಾ ಹಾಗೂ ವಿಶೇಷವಾಗಿ ಸಿರಿಧಾನ್ಯ ಬಳಸುವಂತಾಗಬೇಕು ಎಂದರು.

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ. ವಿಶಾಲ್ ಕುಮಾರ್ ಮಾತನಾಡಿ, ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕಿದೆ. ಆ ನಿಟ್ಟಿನಲ್ಲಿ ಮಕ್ಕಳ ಆರೋಗ್ಯ ಕಡೆ ಹೆಚ್ಚಿನ ಗಮನಹರಿಸು ವಂತಾಗಬೇಕು. ಸರ್ಕಾರದ ಹಲವು ಯೋಜನೆಗಳನ್ನು ಬಳಸಿಕೊಳ್ಳುವಂತಾಗಬೇಕು ಎಂದರು. ಅಂಗನವಾಡಿ ಕೇಂದ್ರದ ಮೇಲ್ವಿಚಾರಕಿ ಶೀಲಾ, ಆರೋಗ್ಯ ಕಾರ್ಯಕರ್ತೆ ಉಮಾಮಹೇಶ್ವರಿ ಮಾತನಾಡಿ ಅಂಗನವಾಡಿ ಕೇಂದ್ರದಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಸ್ತಿçÃಶಕ್ತಿ ಗುಂಪಿನ ಸದಸ್ಯರು, ಪೋಷಕ ವೃಂದದವರಿAದ ಹಲವು ವಿಧದ ಪೌಷ್ಟಿಕ ಆಹಾರಗಳ ಪ್ರದರ್ಶನ ಏರ್ಪಡಿಸಿ ಅತ್ಯುತ್ತಮ ಆಹಾರ ತಯಾರಿಸಿದವರಿಗೆ ಬಹುಮಾನಗಳನ್ನು ವಿತರಿಸಿ ಬಳಿಕ ಮಕ್ಕಳಿಂದ ವಿವಿಧ ಸಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಹೇಮ ಅರುಣ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪೊಮ್ಮಕ್ಕಡ ಕೂಟದ ಸದಸ್ಯೆ ಅಜ್ಜೇಟಿರ ರಾಣಿ, ತಾಲೂಕು ಸ್ತಿçÃಶಕ್ತಿ ಕೂಟದ ಕಾರ್ಯದರ್ಶಿ ಅನಿತಾ, ಮೇಲ್ವಿಚಾರಕಿ ಶೀಲಾ, ನಿವೃತ್ತ ಶಿಕ್ಷಕಿ ಅಕ್ಕಮ್ಮ, ಬೊಪ್ಪಂಡ ಯಶೋಧ, ಆರೋಗ್ಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆ ರಮ್ಯ, ಆರೋಗ್ಯ ಕಾರ್ಯಕರ್ತೆ ಉಮಾಮಹೇಶ್ವರಿ, ಅಂಗನವಾಡಿ ಶಿಕ್ಷಕಿ ಭಾಗ್ಯವತಿ, ಸಹಾಯಕಿ ಮಮತಾ, ಮಕ್ಕಳು, ಪೋಷಕರು ಪಾಲ್ಗೊಂಡಿದ್ದರು.