ಕುಶಾಲನಗರ, ಅ. ೨: ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ, ಅವರು ರಾಜೀನಾಮೆ ಕೊಡುವ ಅಗತ್ಯ ಬರೋದಿಲ್ಲ ಎಂದು ಮುಖ್ಯಮಂತ್ರಿ ಆಪ್ತರು ಹಾಗೂ ಪಶು ಸಂಗೋಪನ ಮತ್ತು ರೇಷ್ಮೆ ಖಾತೆ ಸಚಿವ ಕೆ. ವೆಂಕಟೇಶ್ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಅವರು ಕುಶಾಲನಗರದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಂದರ್ಭ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದು, ಈಗಾಗಲೇ ತನಿಖೆಗೆ ಆದೇಶ ಬಂದಿದೆ. ವರದಿ ಬಂದ ಮೇಲೆ ಎಲ್ಲವೂ ಸರಿ ಹೋಗುತ್ತದೆ ಎಂದು ಹೇಳಿದರು.

ಬಿ.ಎಸ್. ಯಡಿಯೂರಪ್ಪ ಅವರು ಲೋಕಾಯುಕ್ತ ವರದಿ ಬಂದ ನಂತರ ರಾಜೀನಾಮೆ ನೀಡಿ ರುವುದಾಗಿ ವೆಂಕಟೇಶ್ ನೆನಪಿಸಿದರು.