ಪೊನ್ನಂಪೇಟೆ, ಅ. ೨: ಗೋಣಿಕೊಪ್ಪಲು ಕಾವೇರಿ ಕಾಲೇಜು ಐ.ಕ್ಯೂ.ಎ.ಸಿ. ಹಾಗೂ ಪ್ಲೇಸ್‌ಮೆಂಟ್ ಸೆಲ್ ಸಂಯುಕ್ತ ಆಶ್ರಯದಲ್ಲಿ ಮುಂಬೈನ ಫೋರಂ ಆಫ್ ಫ್ರೀ ಎಂಟಪ್ರೆöÊಸಸ್ ಮತ್ತು ಎಂ.ಆರ್.ಪೈ ಫೌಂಡೇಶನ್ ವತಿಯಿಂದ ಎರಡು ದಿನಗಳ "ನಾಯಕತ್ವ ಗುಣ ತರಬೇತಿ" ಶಿಬಿರ ಏರ್ಪಡಿಸಲಾಗಿತ್ತು.

ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಮುಂಬೈನ ರಾಜೀವ್ ಕುಮಾರ್ ಲವ್ ಹಾಗೂ ವಿವೇಕ್ ದತ್ತಾತ್ರೇಯ ಪಟ್ಕಿ ಅವರು ವಿದ್ಯಾರ್ಥಿಗಳಿಗೆ ಸಂವಹನ ಕೌಶಲ್ಯವನ್ನು ರೂಢಿಸಿಕೊಳ್ಳುವ ಮೂಲಕ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ಒಂದು ತಂಡವನ್ನು ಮುನ್ನಡೆಸುವುದು ಹೇಗೆ ಎಂಬುದರ ಬಗ್ಗೆ ಸಮೂಹ ಚಟುವಟಿಕೆಗಳ ಮೂಲಕ ಮನವರಿಕೆ ಮಾಡಿಕೊಟ್ಟರು.

ಎರಡು ದಿನಗಳ ಕಾರ್ಯಾಗಾರ ದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಯಿತು.

ಈ ಸಂದರ್ಭ ಪ್ರಾಂಶುಪಾಲ ಡಾ. ಎಂ.ಬಿ. ಕಾವೇರಿಯಪ್ಪ, ಉಪ ಪ್ರಾಂಶುಪಾಲೆ ಪ್ರೊ. ಎಂ.ಎಸ್. ಭಾರತಿ, ಐ.ಕ್ಯೂ.ಎ.ಸಿ. ಸಂಚಾಲಕಿ ಡಾ. ನಯನ ತಮ್ಮಯ್ಯ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಚಾಲಕಿ ಎಂ.ಡಿ. ರೇಷ್ಮಾ, ಪ್ಲೇಸ್‌ಮೆಂಟ್ ಸೆಲ್ ಅಧಿಕಾರಿ ಯು.ಟಿ. ಪೆಮ್ಮಯ್ಯ, ಕಾರ್ಯಕ್ರಮ ಸಂಚಾಲಕ ಅಜಯ್ ಕುಮಾರ್ ಇನ್ನಿತರು ಇದ್ದರು.