ಚೆಯ್ಯಂಡಾಣೆ, ಅ. ೨: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಜಂಟಿ ಸಂಯುಕ್ತ ಆಶ್ರಯದಲ್ಲಿ ಗ್ರಾಮ ಆರೋಗ್ಯ ತರಬೇತಿ ಶಿಬಿರವನ್ನು ಕಕ್ಕಬ್ಬೆಯಲ್ಲಿ ಆಯೋಜಿಸಲಾಗಿತ್ತು.
ಕಕ್ಕಬ್ಬೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಶಿಬಿರದ ಅಧ್ಯಕ್ಷತೆಯನ್ನು ಕುಂಜಿಲ ಕಕ್ಕಬ್ಬೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿಲ್ಪ ಲೋಕೇಶ್ ವಹಿಸಿದ್ದರು. ಶಿಬಿರದಲ್ಲಿ ಬಾಲ್ಯ ವಿವಾಹ ಮತ್ತು ಮುಟ್ಟಿನ ನೈರ್ಮಲ್ಯತೆ ಬಗ್ಗೆ ಪ್ರಬಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕೆ. ಶೀಲಾ ಮಾಹಿತಿ ನೀಡಿ ಮಾತನಾಡಿದರು. ಅಸಾಂಕ್ರಾಮಿಕ ರೋಗಗಳು, ಕ್ಷಯರೋಗ, ಮಾನಸಿಕ ಆರೋಗ್ಯದ ಬಗ್ಗೆ ತಾಲೂಕು ಆರೋಗ್ಯ ಅಧಿಕಾರಿ ಡಾ. ಚೇತನ್ ಸವಿಸ್ತಾರವಾಗಿ ಮಾಹಿತಿಯನ್ನು ನೀಡಿದರು. ಅಪೌಷ್ಟಿಕತೆ, ರಕ್ತ ಹೀನತೆಯ ಬಗ್ಗೆ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪಾಲಾಕ್ಷ ಮಾಹಿತಿ ನೀಡಿದರು.
ಈ ಸಂದರ್ಭ ಕಕ್ಕಬ್ಬೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಬೀನಾ ಸುಚಿತ್ರ, ಅಭಿವೃದ್ಧಿ ಅಧಿಕಾರಿ ಅಶೋಕ್ ಕುಮಾರ್, ಮಾಜಿ ಗ್ರಾ.ಪಂ. ಅಧ್ಯಕ್ಷ ಸಂಪನ್ ಅಯ್ಯಪ್ಪ, ಗ್ರಾಮ ಪಂಚಾಯಿತಿ ಸದಸ್ಯರು, ಆಶಾ ಕಾರ್ಯಕರ್ತೆಯರು, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಸಮುದಾಯ ಆರೋಗ್ಯ ಅಧಿಕಾರಿ ಗಳು, ಅಂಗನವಾಡಿ ಕಾರ್ಯಕರ್ತೆ ಯರು, ಶಾಲಾ ಶಿಕ್ಷಕಿಯರು, ಸ್ತಿçà ಶಕ್ತಿ ಒಕ್ಕೂಟದ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.