ಮಡಿಕೇರಿ, ಅ. ೨: ಮಹಾತ್ಮ ಗಾಂಧೀಜಿಯವರು ‘ನನ್ನ ಜೀವನವೇ, ನನ್ನ ಸಂದೇಶ’ ಎಂದು ಸಾರಿದ್ದಾರೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರ ಬದುಕು ಸಂದೇಶವಾಗುವAತೆ ಬಾಳಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಪದವಿ ಪೂರ್ವ ಶಿಕ್ಷಣ, ಕಾಲೇಜು ಶಿಕ್ಷಣ ಇಲಾಖೆ, ನಗರಸಭೆ, ಸರ್ವೋದಯ ಸಮಿತಿ, ಕನ್ನಡ ಸಾಹಿತ್ಯ ಪರಿಷತ್ತು, ಸ್ಕೌಟ್ಸ್ ಮತ್ತು ಗೈಡ್ಸ್, ಜಾನಪದ ಪರಿಷತ್ತು ಹಾಗೂ ಭಾರತೀಯ ಸೇವಾದಳ ಇವುಗಳ ಸಹಕಾರದಲ್ಲಿ ರಾಷ್ಟçಪಿತ ಮಹಾತ್ಮ ಗಾಂಧೀಜಿ ಅವರ ೧೫೫ ನೇ ಮತ್ತು ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತಿç ಅವರ ೧೨೦ ನೇ ಜನ್ಮ ವರ್ಷಾಚರಣೆ ಪ್ರಯುಕ್ತ ನಗರದ ಗಾಂಧಿ ಭವನದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ನುಡಿದಂತೆ ನಡೆಯುವ ಶಿಸ್ತನ್ನು ಮಹಾತ್ಮ ಗಾಂಧೀಜಿಯವರAತೆ ಎಲ್ಲರೂ ಜೀವನದಲ್ಲಿ ಪಾಲಿಸಬೇಕು. ಹಾಗಾಗಿ ವಿಶ್ವಸಂಸ್ಥೆ ಸೇರಿದಂತೆ ದೇಶ (ಮೊದಲ ಪುಟದಿಂದ) ವಿದೇಶಗಳಲ್ಲಿಯೂ ಸಹ ಮಹಾತ್ಮ ಗಾಂಧೀಜಿಯವರ ಪುತ್ಥಳಿಯನ್ನು ಕಾಣಬಹುದಾಗಿದೆ ಎಂದರು.
ಮಹಾತ್ಮ ಗಾಂಧೀಜಿಯವರ ಜೀವನ ಹಾಗೂ ಲಾಲ್ ಬಹದ್ದೂರು ಶಾಸ್ತಿç ಅವರ ಸರಳ ಜೀವನ ಎಲ್ಲರಿಗೂ ಮಾದರಿ ಎಂದು ವೆಂಕಟ್ ರಾಜಾ ನುಡಿದರು.
ಸರ್ವೋದಯ ಸಮಿತಿ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ, ಭಾರತಕ್ಕೆ ಅಹಿಂಸಾ ಮಾರ್ಗದ ಮೂಲಕ ಸ್ವಾತಂತ್ರö್ಯವನ್ನು ತಂದುಕೊಟ್ಟ ಮಹಾತ್ಮ ಗಾಂಧೀಜಿ ಎಲ್ಲರನ್ನೂ ಒಟ್ಟುಗೂಡಿಸಿ ಸ್ವಾತಂತ್ರö್ಯ ಪಡೆಯಲು ಶ್ರಮಿಸಿದ್ದರು.
ಲಾಲ್ ಬಹದ್ದೂರು ಶಾಸ್ತಿç ಅವರು ಭಾರತದ ಎರಡನೇ ಪ್ರಧಾನಮಂತ್ರಿಯಾಗಿ ಸರಳ, ಸಜ್ಜನಿಕೆಗೆ ಹೆಸರು ವಾಸಿಯಾಗಿದ್ದರು ಎಂದು ಹೇಳಿದರು.
ಜಾನಪದ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜಿ. ಅನಂತಶಯನ ಮಾತನಾಡಿ, ಗಾಂಧೀಜಿಯವರ ವಿಚಾರಧಾರೆಗಳನ್ನು ತಿಳಿದುಕೊಳ್ಳಲು ಪ್ರತಿಯೊಬ್ಬರೂ ಪುಸ್ತಕ ಹಾಗೂ ಪತ್ರಿಕೆಗಳನ್ನು ಅಧ್ಯಯನ ಮಾಡುವಂತಾಗಬೇಕು ಎಂದು ಹೇಳಿದರು.
ಅಹಿಂಸಾ ಮಾರ್ಗದಿಂದ ಸತ್ಯಾಗ್ರಹದ ಮೂಲಕ ಸ್ವಾತಂತ್ರö್ಯವನ್ನು ತಂದು ಕೊಟ್ಟ ಮಹಾತ್ಮ ಗಾಂಧೀಜಿಯವರು ಅನುಸರಿಸಿದ ಸರಳ ಸಜ್ಜನಿಕೆಯ ವ್ಯಕ್ತಿತ್ವ ಅವರನ್ನು ಮಹಾತ್ಮರನ್ನಾಗಿ ಮಾಡಿತು ಎಂದು ನುಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ, ಮಹಾತ್ಮ ಗಾಂಧೀಜಿಯವರು ಸ್ವಾತಂತ್ರö್ಯದ ಪ್ರತೀಕ, ಗ್ರಾಮ ಸ್ವರಾಜ್ಯದ ಸಾಕಾರ ಮೂರ್ತಿ, ಎಲ್ಲರ ಮೆಚ್ಚಿನ ಬಾಪು ಎಂದು ವರ್ಣಿಸಿದರು.
ಗ್ರಾಮ ಅಭ್ಯೋದಯದ ಪರಿಕಲ್ಪನೆಯನ್ನು ಮಹಾತ್ಮ ಗಾಂಧೀಜಿಯವರು ಭಿತ್ತಿದ್ದಾರೆ. ಮಹಾತ್ಮ ಗಾಂಧೀಜಿಯವರು ಸದ್ಗುಣಗಳ ಸಂಪನ್ನ ಮೂರ್ತಿಯಾಗಿದ್ದಾರೆ ಎಂದರು.
ಸ್ಕೌಟ್ಸ್ ಮತ್ತು ಗೈಡ್ಸ್ನ ಪ್ರಧಾನ ಆಯುಕ್ತರಾದ ಕೆ.ಟಿ. ಬೇಬಿ ಮ್ಯಾಥ್ಯೂ ಮಾತನಾಡಿ, ಮಹಾತ್ಮ ಗಾಂಧೀಜಿಯವರು ಕರ್ನಾಟಕ ರಾಜ್ಯಕ್ಕೆ ಹಲವು ಬಾರಿ ಭೇಟಿ ನೀಡಿ, ಕೊಡಗು ಜಿಲ್ಲೆಗೂ ಭೇಟಿ ನೀಡಿದ್ದು ವಿಶೇಷವಾಗಿದೆ ಎಂದರು.
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ, ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರರಾಜ್, ಸರ್ವೋದಯ ಸಮಿತಿ ಅಧ್ಯಕ್ಷ ಅಂಬೆಕಲ್ಲು ಕುಶಾಲಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪ ನಿರ್ದೇಶಕ ಸಿ. ರಂಗಧಾಮಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಮಂಜುಳ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಬಸಪ್ಪ, ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ಸಿದ್ದೇಗೌಡ, ತಹಶೀಲ್ದಾರ್ ಪ್ರವೀಣ್ ಕುಮಾರ್, ಪೌರಾಯುಕ್ತ ರಮೇಶ್, ಬಿಸಿಎಂ ಇಲಾಖೆ ಅಧಿಕಾರಿ ಕವಿತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕುಮಾರ, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಸ್ಕೌಟ್ಸ್ ಮತ್ತು ಗೈಡ್ಸ್ನ ದಮಯಂತಿ, ಅಂಬೆಕಲ್ಲು ನವೀನ್, ಸಂಪತ್ ಕುಮಾರ್, ಟಿ.ಎಂ.ಮುದ್ದಯ್ಯ, ಹರಿಣಿ ಇತರರು ಇದ್ದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮಹಾತ್ಮ ಗಾಂಧೀಜಿಯವರ ಕುರಿತು ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಪ್ರೌಢಶಾಲಾ, ಪದವಿ ಪೂರ್ವ ಹಾಗೂ ಪದವಿ/ಸ್ನಾತಕೋತ್ತರ ಪದವಿ ಈ ಮೂರು ವಿಭಾಗದಲ್ಲಿ ವಿಜೇತರಾದ ತಲಾ ಮೂವರು ವಿದ್ಯಾರ್ಥಿಗಳಿಗೆ ನಗದು ಬಹುಮಾನವನ್ನು ಗಣ್ಯರು ವಿತರಿಸಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಸ್ವಾಗತಿಸಿದರು, ಕನ್ನಡ ಸಾಹಿತ್ಯ ಪರಿಷತ್ತು ತಂಡದವರು ನಾಡಗೀತೆ ಹಾಡಿದರು, ಕಲಾವಿದ ಈ.ರಾಜು ಮತ್ತು ತಂಡದವರು ಆಶಯ ಗೀತೆ ಹಾಡಿದರು. ವಿನೋದ್ ಮೂಡಗದ್ದೆ ನಿರೂಪಿಸಿ, ವಂದಿಸಿದರು.
ಸಭಾ ಕಾರ್ಯಕ್ರಮಕ್ಕೂ ಮೊದಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಧ್ವಜಾರೋಹಣ ನೆರವೇರಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಪ್ರತಿಜ್ಞಾ ವಿಧಿ ಬೋಧಿಸಿದರು. ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಗಾಂಧಿ ಭವನದವರೆಗೆ ಸ್ವಚ್ಛತಾ ಜಾಥಾ ನಡೆಯಿತು. ಭಾರತ ಸೇವಾದಳ, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಏರ್ಪಡಿಸಿರುವ ಬೀದಿನಾಟಕ ಹಾಗೂ ಸಂಗೀತ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೇರಿದಂತೆ ಗಣ್ಯರು ಚಾಲನೆ ನೀಡಿದರು.