ಸಂಪಾಜೆ, ಅ. ೨: ದಕ್ಷಿಣ ಕನ್ನಡ ಜಿಲ್ಲಾ ಕೃಷಿ ಅಭಿವೃದ್ಧಿ ಸಹಕಾರ ಸಂಘದೊAದಿಗೆ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಅತ್ಯಧಿಕ ಕೃಷಿ ಯಂತ್ರೋಪಕರಣಗಳ ವ್ಯವಹಾರ ಮಾಡಿದ ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಮಂಗಳೂರಿನಲ್ಲಿ ನಡೆದ ಸ್ಕಾö್ಯಡ್ಸ್ ಮಹಾಸಭೆಯಲ್ಲಿ ಸಮಗ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಂಘದ ಅಧ್ಯಕ್ಷ ಅನಂತ್ ಊರುಬೈಲು, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಿ.ಕೆ. ಆನಂದ ಮತ್ತು ನಿರ್ದೇಶಕಿ ವಾಣಿ ಜಗದೀಶ್ ವೇದಿಕೆಯಲ್ಲಿ ಪ್ರಶಸ್ತಿ ಸ್ವೀಕರಿಸಿದರು.