ಸೋಮವಾರಪೇಟೆ, ಅ. ೨: ಕುಶಾಲನಗರ ಮತ್ತು ಸೋಮವಾರಪೇಟೆಯ ಈರ್ವರು ಸರ್ವೆಯರ್ ಗಳು ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕಂದಾಯ ಹಾಗೂ ಸರ್ವೆ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವ ಜನಿಕರಿಗೆ ಅತ್ಯುತ್ತಮ ವಾಗಿ ಒದಗಿಸಿರುವ ಕಂದಾಯ ಹಾಗೂ ಸರ್ವೆ ಅಧಿಕಾರಿಗಳ ಶ್ರೇಷ್ಠ ಸೇವೆಯನ್ನು ಗುರುತಿಸಿ ಸರ್ಕಾರವು ವರ್ಷದ ಅತ್ಯುತ್ತಮ ಕಂದಾಯ ಹಾಗೂ ಸರ್ವೆ ಅಧಿಕಾರಿ ೨೦೨೪ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ಕುಶಾಲನಗರ ತಾಲೂಕಿನಿಂದ ವೆಂಕಟೇಶ್ ಹಾಗೂ ಸೋಮವಾರಪೇಟೆ ತಾಲೂಕಿನ ಜೀವನ್ ಅವರುಗಳಿಗೆ ಇತ್ತೀಚೆಗೆ ಬೆಂಗಳೂರಿನ ವಿಕಾಸ ಸೌಧದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭ ಕಂದಾಯ ಇಲಾಖೆಯ ಆಯುಕ್ತರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.