ಮಡಿಕೇರಿ, ಅ. ೨: ನಾಲ್ಕು ಶಕ್ತಿ ದೇವತೆಗಳ ಕರಗೋತ್ಸವ ಮೂಲಕ ಐತಿಹಾಸಿಕ ಮಡಿಕೇರಿ ದಸರಾಕ್ಕೆ ತಾ. ೩ ರಂದು (ಇಂದು) ಚಾಲನೆ ದೊರೆಯಲಿದೆ. ಈ ಹಿನ್ನೆಲೆಯಲ್ಲಿ ಸಕಲ ತಯಾರಿಯನ್ನು ಮಡಿಕೇರಿ ದಸರಾ ಸಮಿತಿಯಿಂದ ಕೈಗೊಳ್ಳಲಾಗಿದೆ.

ನಗರದ ನಾಲ್ಕು ಶಕ್ತಿ ದೇವತೆಗಳಾದ ಕುಂದುರುಮೊಟ್ಟೆ, ಶ್ರೀ ಚೌಟಿ ಮಾರಿಯಮ್ಮ, ಶ್ರೀ ಕಂಚಿ ಕಾಮಾಕ್ಷಿ, ಶ್ರೀ ದಂಡಿನ ಮಾರಿಯಮ್ಮ ಹಾಗೂ ಶ್ರೀ ಕೋಟೆ ಮಾರಿಯಮ್ಮ ದೇವಾಲಯಗಳ ಕರಗಗಳಿಗೆ ಸಂಜೆ ೫ ಗಂಟೆಗೆ ಮಹದೇವಪೇಟೆಯ ಪಂಪಿನಕೆರೆ ಬಳಿ ನಗರ ದಸರಾ ಸಮಿತಿಯಿಂದ ಸಾಂಪ್ರದಾಯಿಕ ಪೂಜೆಯನ್ನು ಸಲ್ಲಿಸಲಾಗುವುದು. ನಂತರ ಕರಗಗಳ ನಗರ ಪ್ರದಕ್ಷಿಣೆ ಆರಂಭಗೊಳ್ಳಲಿದೆ.

ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ಕರಗವನ್ನು ಪಿ.ಪಿ. ಚಾಮಿ, ಶ್ರೀ ಕೋಟೆ ಮಾರಿಯಮ್ಮ ಕರಗವನ್ನು ಪಿ.ಬಿ. ಅನೀಶ್, ಕಂಚಿ ಕಾಮಾಕ್ಷಿ ಕರಗವನ್ನು ಪಿ.ಸಿ.ಉಮೇಶ್, ದಂಡಿನ ಮಾರಿಯಮ್ಮ ಕರಗವನ್ನು ಉಮೇಶ್ ಹೊರಲಿದ್ದಾರೆ.