*ಗೋಣಿಕೊಪ್ಪ, ಅ. ೨: ಪಟ್ಟಣದ ಸ್ವಾತಂತ್ರ್ಯ ಹೋರಾಟಗಾರರ ಭವನದಲ್ಲಿ ಚಾಮುಂಡಿ ದೇವಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಹತ್ತು ದಿನಗಳ ಪೂಜಾ ಕಾರ್ಯಕ್ಕೆ ೪೬ನೇ ವರ್ಷದ ಗೋಣಿಕೊಪ್ಪ ದಸರಾ ಜನೋತ್ಸವ ಆಚರಣೆ ನಡೆಯಲಿದೆ. ಮಹಿಳಾ ದಸರಾ, ಯುವ ದಸರಾ, ಮಕ್ಕಳ ದಸರಾ, ಕವಿಗೋಷ್ಠಿ, ಪತ್ರಕರ್ತರ ಕ್ರೀಡಾಕೂಟ, ಕಬಡ್ಡಿ ಪಂದ್ಯಾಟ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ತಾ.೩ರಂದು ಬೆಳಿಗ್ಗೆ ಸ್ವಾತಂತ್ರ್ಯ ಹೋರಾಟಗಾರರ ಭವನದಲ್ಲಿ ಬೆಳಿಗ್ಗೆ ೬ ಗಂಟೆಗೆ ಗಣಪತಿ ಹೋಮ, ೭ ಗಂಟೆಗೆ ಶ್ರೀ ಚಾಮುಂಡೇಶ್ವರಿ ದೇವಿಯ ಪ್ರತಿಷ್ಠಾಪನೆಯು ನೆರವೇರಲಿದೆ. ಶ್ರೀ ಕಾವೇರಿ ದಸರಾ ಸಮಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಅಧ್ಯಕ್ಷತೆಯಲ್ಲಿ ಉಸ್ತುವಾರಿ, ಸಣ್ಣ ನೀರಾವರಿ, ವಿಜ್ಞಾನ ಹಾಗೂ ತಂತ್ರಜ್ಞಾನ ಖಾತೆ ಸಚಿವ ಎನ್.ಎಸ್. ಭೋಸರಾಜು ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟೀರ ಎಸ್ ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ, ಕೊಡಗು ಮೈಸೂರು ಲೋಕಸಭಾ ಕ್ಷೇತ್ರ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್,
ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ, ನೈಋತ್ಯ ಶಿಕ್ಷಕರ ಕ್ಷೇತ್ರ ವಿಧಾನ ಪರಿಷತ್ ಸದಸ್ಯ ಎಸ್. ಎಲ್. ಭೋಜೇಗೌಡ, ಕಾವೇರಿ ದಸರಾ ಸಮಿತಿ ಕಾರ್ಯಾಧ್ಯಕ್ಷ ಕೊಳ್ಳಿಮಾಡ ಅಜಿತ್ ಅಯ್ಯಪ್ಪ, ಜಿಲ್ಲಾಧಿಕಾರಿ ವೆಂಕಟ್ರಾಜ, ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ, ಉಪ ವಿಭಾಗಾಧಿಕಾರಿ ನರ್ವಾಡೆ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆನಂದ ಪ್ರಕಾಶ್ ಮೀನಾ, ವಿಧಾನ ಪರಿಷತ್ ಮಾಜಿ ಸದಸ್ಯ ಚೆಪ್ಪುಡೀರ ಅರುಣ್ ಮಾಚಯ್ಯ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೇಶವ ಕಾಮತ್ ಎಂ.ಪಿ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಮೀದೇರಿರ, ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಡಿ.ಮುಕುಂದ,ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕುಸುಮಾ ಜೋಯಪ್ಪ, ಕಾವೇರಿ ದಸರಾ ಸಮಿತಿ ಮಾಜಿ ಅಧ್ಯಕ್ಷ ಕೊಪ್ಪಿರ ಸನ್ನಿ ಸೋಮಯ್ಯ ಪಾಲ್ಗೊಳ್ಳಲಿದ್ದಾರೆ.