ಐಗೂರು, ಅ. ೨: ಸುಂಟಿಕೊಪ್ಪ ಸರಕಾರಿ ಶಾಲೆಯಲ್ಲಿ ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಹೊಸ ತೋಟದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನಗಳನ್ನು ಗಿಟ್ಟಿಸಿಕೊಂಡಿದ್ದಾರೆ. ಭಾರದ ಗುಂಡು ಮತ್ತು ತಟ್ಟೆ ಎಸೆತದಲ್ಲಿ ನಾಸಿರ ಪ್ರಥಮ ಸ್ಥಾನ, ಉದ್ದ ಜಿಗಿತದಲ್ಲಿ ರಿಫ ಎ. ದ್ವಿತೀಯ ಸ್ಥಾನ ಪಡೆದಿದ್ದಾರೆ. ಈ ಇಬ್ಬರು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಮಾದಾಪುರದ ಎಸ್.ಜೆ.ಎಂ. ಶಾಲೆಯಲ್ಲಿ ನಡೆದಿದ್ದು, ಕಥೆ ಹೇಳುವುದು ಮತ್ತು ಆಶುಭಾಷಣ ಸ್ಪರ್ಧೆಯಲ್ಲಿ ಮನ್ವಿತ್ ಗೌಡ ಪ್ರಥಮ ಸ್ಥಾನ, ಭಾಷಣ ಸ್ಪರ್ಧೆಯಲ್ಲಿ ಲಕ್ಷಿö್ಮ ಕೆ.ಎಂ. ಪ್ರಥಮ ಸ್ಥಾನ ಪಡೆದು ತಾಲೂಕುಮಟ್ಟಕ್ಕೆ ಆಯ್ಕೆಯಾಗಿದ್ದಾರೆ.