ಚೆಯ್ಯಂಡಾಣೆ, ಅ. ೩: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂಗನವಾಡಿ ದಿನಾಚರಣೆ ಅಂಗವಾಗಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ £Ãಡುವ ತಾಲೂಕು ಮಟ್ಟದ ಉತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿಯನ್ನು ಕರಡ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಕೆ.ಪಿ. ಈಶ್ವರಿ ಪಡೆದುಕೊಂಡಿದ್ದಾರೆ.

ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸೌಲಭ್ಯಗಳನ್ನು ಫಲಾನುಭವಿಗಳಿಗೆ ಸಮರ್ಪಕವಾಗಿ ಒದಗಿಸಲು ತೆಗೆದುಕೊಂಡಿರುವ ಕ್ರಮಗಳನ್ನು ಗುರುತಿಸಿ ಇಲಾಖೆ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದೆ.