ಮಡಿಕೇರಿ, ಅ. ೩: ವೀರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ತಾ.೪ರಂದು (ಇಂದು) ಬೆಳಿಗ್ಗೆ ೧೦.೩೦ ಗಂಟೆಗೆ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.

ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ಶಾಸಕರಾದ ಎ.ಎಸ್. ಪೊನ್ನಣ್ಣ ಉದ್ಘಾಟಿಸುವರು. ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಸಿ. ದಯಾನಂದ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೊಡಗು ವಿವಿ ಕುಲಸಚಿವ ಪ್ರೊ. ಸುರೇಶ್ ಎಂ ಆಲೆಟ್ಟಿ, ಕಾವೇರಿ ವಿದ್ಯಾಸಂಸ್ಥೆ ಅಧ್ಯಕ್ಷ ಪ್ರೊ. ಇಟ್ಟೀರ ಕೆ. ಬಿದ್ದಪ್ಪ, ಪ್ರಥಮ ದರ್ಜೆ ಕಾಲೇಜಿನ ಐ.ಕ್ಯೂ.ಎ.ಸಿ ಸಂಚಾಲಕ ಡಾ.ಕೆ. ಬಸವರಾಜು ಪಾಲ್ಗೊಳ್ಳುವರು.