ಗೋಣಿಕೊಪ್ಪಲು, ಅ. ೩: ಗ್ರಾಮದ ಜನತೆಗೆ ಅನುಕೂಲವಾಗಲು ಪ್ರತಿ ತಿಂಗಳು ಆರೋಗ್ಯ ಶಿಬಿರವನ್ನು ಹಮ್ಮಿಕೊಳ್ಳಬೇಕು. ಅಕ್ಟೋಬರ್ ತಿಂಗಳಿನಲ್ಲಿ ರಕ್ತದಾನ ಶಿಬಿರ ಏರ್ಪಡಿಸಬೇಕು. ಈ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಅಗತ್ಯ ಸಹಕಾರ ನೀಡಲಾಗುವುದು. ನಾಗರಿಕರು ಕೂಡ ಸ್ಪಂದನ ನೀಡುವಂತಾಗಬೇಕು ಎಂದು ಬಿ. ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೊಲ್ಲೀರ ಬೋಪಣ್ಣ ಸಲಹೆ ನೀಡಿದರು.
ಬಿ. ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಟ್ಟಂದಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಏರ್ಪಡಿಸಲಾಗಿದ್ದ ರಕ್ಷಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ ಹಲವು ದಶಕಗಳಿಂದ ಪ್ರಾಥಮಿಕ ಆರೋಗ್ಯ ಕೇಂದ್ರವು ಸ್ಥಳೀಯ ಗ್ರಾಮಸ್ಥರಿಗೆ ಉತ್ತಮ ರೀತಿಯಲ್ಲಿ ಸ್ಪಂದನ ನೀಡುತ್ತಿದೆ. ಇದು ಸದಾ ಮುಂದುವರೆಯಬೇಕು. ಗ್ರಾಮದ ಜನತೆಗೆ ಅಗತ್ಯವಿರುವ ಆರೋಗ್ಯದ ಸಲಹೆ ಸೂಚನೆಗಳನ್ನು ಇಲ್ಲಿನ ವೈದ್ಯರು ಹಾಗೂ ಸಿಬ್ಬಂದಿಗಳು ಉತ್ತಮ ರೀತಿಯಲ್ಲಿ ನೀಡುತ್ತಿರುವುದು ಶ್ಲಾಘನೀಯ ಎಂದರು.
ತಾಲೂಕು ವೈದ್ಯಾಧಿಕಾರಿಗಳಾದ ಡಾ. ಯತಿರಾಜ್ ಮಾತನಾಡಿ, ರಕ್ಷಾ ಸಮಿತಿಗೆ ನೂತನವಾಗಿ ನಾಮ ನಿರ್ದೇಶನ ಸದಸ್ಯರಾಗಿ ಕೆಲವರು ಆಯ್ಕೆಯಾಗಿದ್ದಾರೆ. ಹಿಂದಿನಿAದಲೂ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಸಭೆಯ ನಿರ್ಣಯದಂತೆ ಅಕ್ಟೋಬರ್ ತಿಂಗಳಿನಲ್ಲಿ ರಕ್ತದಾನ ಶಿಬಿರವು ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಪ್ರತಿ ತಿಂಗಳು ಆರೋಗ್ಯ ಶಿಬಿರ ನಡೆಸಲು ಯೋಜನೆ ರೂಪಿಸಲಾಗುವುದು, ಕೇಂದ್ರದಲ್ಲಿ ಸ್ವಚ್ಛತೆ, ಆರೋಗ್ಯ, ಗರ್ಭಿಣಿಯರು ಮತ್ತು ಮಕ್ಕಳ ಅಪೌಷ್ಟಿಕತೆ ಹಾಗೂ ಆರೋಗ್ಯ ಸಮಸ್ಯೆಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರದ ಹಂತದಲ್ಲಿಯೇ ಪರಿಣಾಮಕಾರಿಯಾಗಿ ಪರಿಹಾರ ಕಂಡುಕೊಳ್ಳುವ ಬಗ್ಗೆ ಸಮಗ್ರ ಮಾಹಿತಿ ಒದಗಿಸಿದರು. ಸಭೆಯಲ್ಲಿ ಕೇಂದ್ರಕ್ಕೆ ಒಳಪಡುವ ೬ ಗ್ರಾಮ ಪಂಚಾಯಿತಿಗಳ ರಕ್ಷಾ ಸಮಿತಿಯ ಸದಸ್ಯರುಗಳಾದ ಜೆನಿತ, ಸಿ.ಜೆ. ಶಾಂತಿ, ಅರ್ಪಿತ, ಪುನೀತ್ ಸೇರಿದಂತೆ ಆರೋಗ್ಯ ಕೇಂದ್ರದ ವೈದ್ಯ ಡಾ. ಶರಣ್ ಸುಬ್ಬಯ್ಯ, ಪೊನ್ನಂಪೇಟೆ ತಾಲೂಕಿನ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು, ಆರೋಗ್ಯ ಸಹಾಯಕಿ ಯರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಆರೋಗ್ಯ ಸುರಕ್ಷಾಧಿ ಕಾರಿಗಳು, ಸಮುದಾಯ ಆರೋಗ್ಯ ಅಧಿಕಾರಿಗಳು, ಶುಶ್ರೂಷಾಧಿಕಾರಿಗಳು ಭಾಗವಹಿಸಿದ್ದರು.