ಮಡಿಕೇರಿ, ಅ. ೩: ಮಡಿಕೇರಿಯ ಓಂಕಾರೇಶ್ವರ ದೇವಸ್ಥಾನ ರಸ್ತೆಯಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿಗಳ ಕಚೇರಿ ಬಳಿ ಕಳೆದ ಕೆಲ ದಿನಗಳಿಂದ ಮಾನಸಿಕ ಅಸ್ವಸ್ಥ ರೋರ್ವರು ಬಂದು ಸೇರಿಕೊಂಡಿದ್ದು ದಾರಿ ಹೋಕರಿಗೆ ಕಿರಿಕಿರಿ ಮಾಡುತ್ತಿರುವುದಾಗಿ ಸಾರ್ವಜನಿಕರು ಅಳಲು ತೋಡಿಕೊಂಡಿದ್ದಾರೆ. ಶಾಲಾ ಮಕ್ಕಳನ್ನು ಓಡಿಸಿಕೊಂಡು ಹೋಗಿ ಹೊಡೆಯುವುದು, ಪ್ರಶ್ನಿಸಲು ತೆರಳಿದ ಸಾರ್ವಜನಿಕರ ಮೇಲೂ ದೊಣ್ಣೆಯಿಂದ ಹಲ್ಲೆ ನಡೆಸಲು ಈ ವ್ಯಕ್ತಿ ಯತ್ನಿಸುತ್ತಿದ್ದಾರೆ. ಇದರಿಂದಾಗಿ ಸಾರ್ವಜನಿಕರಿಗೆ ಕಿರಿಕಿರಿಯಾಗುತ್ತಿದ್ದು, ಸಂಬAಧಿಸಿದವರು ಕ್ರಮ ಕೈಗೊಳ್ಳಬೇಕೆಂದು ಜನರು ಆಗ್ರಹಿಸಿದ್ದಾರೆ.