ಸೋಮವಾರಪೇಟೆ, ಅ. ೩: ತಾಲೂಕಿನ ಶಾಂತಳ್ಳಿ-ಬೆಟ್ಟದಳ್ಳಿಯಲ್ಲಿರುವ ಶ್ರೀ ಕುಮಾರಲಿಂಗೇಶ್ವರ ವಿದ್ಯಾಸಂಸ್ಥೆಯ ವತಿಯಿಂದ ಶಾಲೆಯಲ್ಲಿ ಸೇವೆ ಸಲ್ಲಿಸಿ, ಬೇರೆಡೆಗೆ ವರ್ಗಾವಣೆಯಾದ ಶಿಕ್ಷಕರು ಹಾಗೂ ಸಿಬ್ಬಂದಿಗಳನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.

ಕುಮಾರಲಿಂಗೇಶ್ವರ ಸರ್ಕಾರಿ ಶಾಲೆಯ ಸಭಾಂಗಣದಲ್ಲಿ, ಶಾಲಾಡಳಿತ ಮಂಡಳಿ ಅಧ್ಯಕ್ಷ ಕೆ.ಕೆ. ಗೋಪಾಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಆಡಳಿತ ಮಂಡಳಿ ವಾರ್ಷಿಕ ಮಹಾಸಭೆಯಲ್ಲಿ, ಪ್ರೌಢಶಾಲೆಯಲ್ಲಿ ಶಿಕ್ಷಕರುಗಳಾಗಿ ಸೇವೆ ಸಲ್ಲಿಸಿದ ಉಷಾಕುಮಾರಿ, ಪರಶುರಾಮ, ಕುಶಾಲಪ್ಪ, ಸಿಬ್ಬಂದಿಗಳಾದ ದೀಪಕ್, ರಘು, ವಿಜಯ ಅವರುಗಳನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಕಾರ್ಯಪ್ಪ, ಬಾತ್ಮೀದಾರ ಸಂಪತ್, ನಿರ್ದೇಶಕ ಅರುಣ್ ಕೊತ್ನಳ್ಳಿ, ಮಾಜಿ ಎಂ.ಎಲ್.ಸಿ. ಮೇದಪ್ಪ ಸೇರಿದಂತೆ ನಿರ್ದೇಶಕರುಗಳು ಉಪಸ್ಥಿತರಿದ್ದರು. ಶ್ರೀಕುಮಾರಲಿಂಗೇಶ್ವರ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಲೀಲಾವತಿ, ಶಿಕ್ಷಕರುಗಳಾದ ಭವ್ಯ, ಶ್ವೇತಾ, ನಿರ್ಮಲ ಅವರುಗಳು ಕಾರ್ಯಕ್ರಮ ನಿರ್ವಹಿಸಿದರು.