ಸೋಮವಾರಪೇಟೆ, ಅ. ೩: ಚೈಲ್ಡ್ ರೈಟ್ಸ್ ಟ್ರಸ್ಟ್, ಬೆಂಗಳೂರು ಡಾ. ಪದ್ಮನಿ ಮಕ್ಕಳ ಹಕ್ಕುಗಳ ಫೆಲೋಶಿಪ್ ಮತ್ತು ನಾವು ಪ್ರತಿಷ್ಠಾನ ಸೋಮವಾರಪೇಟೆ ಇವರ ಸಹಯೋಗದೊಂದಿಗೆ ತಾಲೂಕಿನ ಹಾನಗಲ್ಲು ಶೆಟ್ಟಳ್ಳಿ ಸರ್ಕಾರಿ ಹಿರಿಯ ಪಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಒಡಂಬಡಿಕೆಯ ಪರಿಚ್ಚೇದಗಳ ಪರಿಚಯ ಮತ್ತು ಮಕ್ಕಳ ಹಕ್ಕುಗಳ ಜಾಗೃತಿ ಕಾರ್ಯಕ್ರಮ ನಡೆಯಿತು.
ಕುರಿತು ಪರಿಚಯಿಸುವ ಮೂಲಕ ಚೈಲ್ಡ್ ರೈಟ್ಸ್ ಟ್ರಸ್ಟ್ನ ಸಂಯೋಜಕಿ ಸುಮನ್ ಮ್ಯಾಥ್ಯೂ ಮಕ್ಕಳ ಹಕ್ಕುಗಳ ಬಗ್ಗೆ ಹಾಗೂ ಮಕ್ಕಳ ಹಕ್ಕುಗಳ ಒಡಂಬಡಿಕೆಯ ಪರಿಚ್ಚೇದಗಳ ಬಗ್ಗೆ ತಿಳಿಸಿಕೊಟ್ಟರು.
ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಬಿ.ಎಂ. ಸತೀಶ್, ಸಹ ಶಿಕ್ಷಕ ಸುಕುಮಾರ್ ಮತ್ತು ನಾವು ಪ್ರತಿಷ್ಠಾನದ ಗೌತಮ್ ಕಿರಗಂದೂರು ಇದ್ದರು.