ಮಡಿಕೇರಿ, ಅ. ೩: ರಾಷ್ಟಿçÃಯ ಆಯುಷ್ ಅಭಿಯಾನ ಯೋಜನೆಯಡಿ ೨೦೨೪-೨೫ನೇ ಸಾಲಿನ ಮೊಬೈಲ್ ಯೂನಿಟ್ ಕಾರ್ಯಕ್ರಮಕ್ಕೆ ಗುತ್ತಿಗೆ ಆಯುರ್ವೇದ ವೈದ್ಯರು ಮತ್ತು ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಖಾಲಿ ಇರುವ ಸ್ತಿçÃರೋಗ ಅಟೆಂಡರ್ ಹುದ್ದೆಗಳ ನೇಮಕಾತಿ ಸಂಬAಧ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ತಾತ್ಕಾಲಿಕ ಆಯ್ಕೆ ಪಟ್ಟಿ ಕುರಿತಂತೆ ಆಕ್ಷೇಪಣೆಗಳಿದ್ದಲ್ಲಿ ಅಕ್ಟೋಬರ್, ೧೬ ರ ಸಂಜೆ ೪ ಗಂಟೆಯೊಳಗೆ ಲಿಖಿತದಲ್ಲಿ ಪೂರಕ ದಾಖಲಾತಿಗಳೊಂದಿಗೆ ಜಿಲ್ಲಾ ಆಯುಷ್ ಅಧಿಕಾರಿ, ಜಿಲ್ಲಾ ಆಯುಷ್ ಇಲಾಖೆ, ಮಹದೇವಪೇಟೆ, ಮಡಿಕೇರಿ, ಕೊಡಗು ಜಿಲ್ಲೆ ಇವರಿಗೆ ಮನವಿಯ ಮೂಲಕ ಸಲ್ಲಿಸಬಹುದು. ಈ ಅವಧಿಯ ನಂತರ ಸ್ವೀಕೃತವಾದ ಆಕ್ಷೇಪಣೆಗಳನ್ನು ತಿರಸ್ಕರಿಸಲಾಗುವುದು ಎಂದು ಜಿಲ್ಲಾ ಆಯುಷ್ ಕಚೇರಿಯ ಜಿಲ್ಲಾ ಆಯುಷ್ ಅಧಿಕಾರಿ ಡಾ. ರೇಣುಕಾ ದೇವಿ ಅವರು ತಿಳಿಸಿದ್ದಾರೆ.