ನಾಪೋಕ್ಲು, ಅ. ೩: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಡಿಕೇರಿ ತಾಲೂಕು, ವಿವಿಧ ಸಂಘ ಸಂಸ್ಥೆಗಳು ಮತ್ತು ಊರಿನ ದಾನಿಗಳ ಸಹಕಾರ ದೊಂದಿಗೆ ಕಾರುಗುಂದ ಗೌಡ ಸಮಾಜದಲ್ಲಿ ಇತ್ತೀಚೆಗೆ ಜರುಗಿದ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಕಾರ್ಯಕ್ರಮದ ಯಶಸ್ಸಿಗಾಗಿ ದುಡಿದ ಪ್ರಮುಖರನ್ನು ಸನ್ಮಾನಿಸಲಾಯಿತು. ಮಡಿಕೇರಿ ನಗರಸಭೆ ಮಾಜಿ ಸದಸ್ಯ ಟಿ.ಎಂ ಅಯ್ಯಪ್ಪ, ಕಾರುಗುಂದ ಗೌಡ ಸಮಾಜದ ಕಾರ್ಯದರ್ಶಿ ಬೆಳ್ಯನ ಚಂದ್ರಪ್ರಕಾಶ್, ಬೇಂಗೂರು ಪಂಚಾಯಿತಿ ಆರಕ್ಷಕ ಮಿಲನ್ ಮುತ್ತಣ್ಣ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಶಿಬಿರಾಧಿಕಾರಿ ನಂದಕುಮಾರ್ ಪಟ್ಟಡ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಆರೋಗ್ಯ ಸಹಾಯಕಿ ನೇತ್ರಾವತಿ ಅವರುಗಳನ್ನು ಶಿಬಿರದ ಪರವಾಗಿ ವೇದಿಕೆಯಲ್ಲಿದ್ದ ಗಣ್ಯರು ಸನ್ಮಾನಿಸಿದರು.

ಈ ಸಂದರ್ಭ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ, ಬೆಟ್ಟಗೇರಿ ವಿ.ಎಸ್.ಎಸ್.ಎನ್ ಅಧ್ಯಕ್ಷ ತಳೂರು ಕಿಶೋರ್ ಕುಮಾರ್, ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆ ನಿಕಟಪೂರ್ವ ಅಧ್ಯಕ್ಷ ಅರುಣ್ ಬಾನಂಗಡ, ಹೊಸೂರು ಜೆ. ಸತೀಶ್ ಕುಮಾರ್, ಮಡಿಕೇರಿ ನಗರಸಭೆ ಮಾಜಿ ಅಧ್ಯಕ್ಷ ಪಟ್ಟಮಾಡ ಡಿ. ಪೊನ್ನಪ್ಪ, ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷ ಧನಂಜಯ್ ಅಗೋಳಿಕಜೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕಿ ಲೀಲಾವತಿ ಸೇರಿದಂತೆ ವಿವಿಧ ಸಂಘ-ಸAಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು.