ಮಡಿಕೇರಿ, ಅ. ೪: ರಾಜಾಸೀಟ್ ಉದ್ಯಾನವನ ಅಭಿವೃದ್ದಿ ಕಾಮಗಾರಿಯಲ್ಲಿ ಬಹುಕೋಟಿ ಅಕ್ರಮವಾಗಿದೆ ಎಂಬ ದೂರಿನಡಿ ತಾ. ೧೪ ಹಾಗೂ ೧೫ ರಂದು ಲೋಕಾಯುಕ್ತ ತನಿಖಾಧಿಕಾರಿಯಿಂದ ಸ್ಥಳ ಪರಿಶೀಲನೆ ನಡೆಯಲಿದೆ.
ಕಾಂಗ್ರೆಸ್ ವಕ್ತಾರ ತೆನ್ನೀರ ಮೈನಾ, ಗ್ರೇಟರ್ ರಾಜಾಸೀಟ್ ಯೋಜನೆಯಲ್ಲಿ ಬಹುಕೋಟಿ ಹಗರಣ ನಡೆದಿದೆ ಎಂದು ಆರೋಪಿಸಿ ತಾ. ೨೦-೩-೨೦೨೩ ರಂದು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಇದರನ್ವಯ ಪ್ರಕರಣ ದಾಖಲಾಗಿದ್ದು, ತನಿಖಾಧಿಕಾರಿ ತೇಜಶ್ರೀ ಬಿ. ಮದ್ದೋಡಿ ತಾ. ೧೪ ಹಾಗೂ ೧೫ ರಂದು ಮಡಿಕೇರಿಗೆ ಆಗಮಿಸಿ ಸ್ಥಳ ಪರಿವೀಕ್ಷಣೆ ನಡೆಸಲಿದ್ದಾರೆ. ಪರಿಶೀಲನೆ ವೇಳೆ ದೂರಿಗೆ ಸಂಬAಧಿಸಿದ ಅಗತ್ಯ ದಾಖಲೆಗಳೊಂದಿಗೆ ತನಿಖೆಗೆ ಸಹಕರಿಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೂ ಲೋಕಾಯುಕ್ತ ಅಧಿಕಾರಿಗಳು ಪತ್ರ ಮುಖೇನ ಸೂಚಿಸಿದ್ದಾರೆ.