ಮಡಿಕೇರಿ, ಅ. ೪: ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ವಿಭಾಗದಿಂದ ‘ನೈತಿಕತೆಯೇ ಸ್ವಾತಂತ್ರö್ಯ’ ಎಂಬ ಶೀರ್ಷಿಕೆಯಡಿ ಕಳೆದೊಂದು ತಿಂಗಳು ರಾಷ್ಟçವ್ಯಾಪಿ ಅಭಿಯಾನ ನಡೆದಿದೆ. ಕೊಡಗಿನಲ್ಲೂ ವಿವಿಧ ಕಾರ್ಯಕ್ರಮಗಳು ನಡೆದಿದ್ದು, ಸಮಾರೋಪ ಸಮಾರಂಭ ವೀರಾಜಪೇಟೆಯ ಅರಮೇರಿ ಕಳಂಚೇರಿ ಮಠದಲ್ಲಿ ತಾ. ೬ರಂದು ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಘಟಕದ ಜಿಲ್ಲಾ ಸಂಚಾಲಕಿ ಝೈನಬಾ ರೆಹಮಾನ್ ತಿಳಿಸಿದರು.
ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿಯಾನದ ಅಂಗವಾಗಿ ಕೊಡಗಿನಲ್ಲಿ ಮಹಿಳಾ ಸಮಾವೇಶ, ಗಣ್ಯ ವ್ಯಕ್ತಿಗಳ ಭೇಟಿ-ಸಂದರ್ಶನ, ರಸಪ್ರಶ್ನೆ, ಪ್ರಬಂಧ ಸ್ಪರ್ಧೆ, ಮನೆ ಮನೆಗೆ ಭೇಟಿ, ಸತ್ಕಾರ ಕೂಟ ಹಮ್ಮಿಕೊಳ್ಳಲಾಗಿತ್ತು. ಅಭಿಯಾನದ ಸಮಾರೋಪ ಸಮಾರಂಭವು ಅರಮೇರಿ ಕಳಂಚೇರಿ ಮಠದ ಪೀಠಾಧಿಪತಿ ಶಾಂತಮಲ್ಲಿಕಾರ್ಜುನ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ. ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆ ಡಾ.ಹೆಚ್.ಎಂ ಕಾವೇರಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಂಗಳೂರಿನ ಲುಬ್ನಾ ಝಕಿಯಾ ‘ನೈತಿಕತೆಯೇ ಸ್ವಾತಂತ್ರö್ಯದ ಭರವಸೆ' ಎಂಬ ವಿಷಯದಲ್ಲಿ ಉಪನ್ಯಾಸ ನೀಡಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಘಟಕದ ಜಿಲ್ಲಾ ಕಾರ್ಯದರ್ಶಿ ಮುಹೀನಾ ಮುಹಮ್ಮದ್ ಮಾತನಾಡಿ, ಇತ್ತೀಚೆಗೆ ಸಮಾಜ ಎದುರಿಸುತ್ತಿರುವ ಸಮಸ್ಯೆ ಮತ್ತು ಸವಾಲುಗಳು ಕಳವಳಕಾರಿಯಾಗಿದೆ. ನಗ್ನತೆ, ಜೂಜು, ಮದ್ಯಪಾನ, ಮಾದಕ ವ್ಯಸನ, ವಿವಾಹೇತ್ತರ ಸಂಬAಧಗಳು, ಸಲಿಂಗಕಾಮ ಮತ್ತು ವೇಶ್ಯಾವಾಟಿಕೆಯಂತಹ ಕೆಡುಕುಗಳು ಸಮಾಜ ಹದಗೆಡುತ್ತಿರುವುದಕ್ಕೆ ಕೈಗನ್ನಡಿಯಾಗಿದೆ. ಇಂದಿನ ಆಧುನಿಕ ಯುಗದಲ್ಲಿ ಯುವ ಜನಾಂಗ ದಾರಿ ತಪ್ಪುತ್ತಿದ್ದು, ಕುಟುಂಬಗಳು ಛಿದ್ರಗೊಳ್ಳುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರ. ಉತ್ತಮ ಸಮಾಜ ನಿರ್ಮಾಣದ ಉದ್ದೇಶದಿಂದ ದೇಶದ ಉದ್ದಗಲಕ್ಕೂ ನಡೆಸಿದ ಅಭಿಯಾನಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಯಿತು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗದ ಪ್ರಮುಖರಾದ ಕೈರುನ್ನೀಸಾ, ಮಫೀದಾ ಅಬ್ದುಲ್ಲಾ, ತಾಹಿರಾ ರಶೀದ್ ಹಾಜರಿದ್ದರು.