ಸೋಮವಾರಪೇಟೆ, ಅ. ೪: ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾ ಭಿವೃದ್ಧಿ ಮತ್ತು ಪಂಚಾ ಯತ್ ರಾಜ್ ಸಂಸ್ಥೆ ಮೈಸೂರು ವತಿಯಿಂದ ಗ್ರಾಮ ಪಂಚಾಯಿತಿ ಅರಿವು ಕೇಂದ್ರದ ಮೇಲ್ವಿಚಾರಕರಿಗೆ ‘ಮಕ್ಕಳ ಸ್ನೇಹಿ ಗ್ರಾಮೀಣ ಗ್ರಂಥಾಲಯ’ ತರಬೇತಿ ಕಾರ್ಯಾಗಾರ ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ನಡೆಯಿತು. ಕಾರ್ಯಾಗಾರವನ್ನು ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಪರಮೇಶ ಕುಮಾರ್ ಉದ್ಘಾಟಿಸಿದರು. ೧೦ ಮತ್ತು ೧೨ನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ ಕೌಶಲ್ಯವನ್ನು ವೃದ್ಧಿಸಲು ಹಾಗೂ ಸ್ಮರ್ಧಾತ್ಮಕ ಪರೀಕ್ಷೆಗಳಿಗೆ ಹೇಗೆ ತಯಾರಿ ನಡೆಸಬೇಕು ಎಂಬ ಬಗ್ಗೆ ತರಬೇತಿ ನೀಡಬೇಕಾಗಿದೆ. ಪಂಚಾಯಿತಿ ವ್ಯಾಪ್ತಿ ಯಲ್ಲಿನ ವಿದ್ಯಾರ್ಥಿಗಳ ಗುಂಪು ರಚಿಸಿಕೊಂಡು ಆನ್‌ಲೈನ್ ತರಬೇತಿ ಯನ್ನು ನುರಿತ ಉಪನ್ಯಾಸಕರಿಂದ ಕೊಡಿಸಲಾಗುವುದು. ಗ್ರಾಮ ಪಂಚಾಯಿತಿ ಅರಿವು ಕೇಂದ್ರದ ಮೇಲ್ವಿಚಾರಕರು ಈ ಬಗ್ಗೆ ಕ್ರಮವಹಿಸಬೇಕು. ಎಲ್ಲಾ ಸೌಲಭ್ಯಗಳನ್ನು ಪಂಚಾಯಿತಿ ವತಿಯಿಂದ ನೀಡಲಾಗುವುದು ಎಂದು ಹೇಳಿದರು.

ಕಾರ್ಯಾಗಾರದಲ್ಲಿ ತರಬೇತಿ ಸಂಯೋಜಕರಾದ ರವಿ, ಜಿಲ್ಲಾ ಸಂಯೋಜಕ ರಕ್ಷಿತ್, ಸಂಪನ್ಮೂಲ ವ್ಯಕ್ತಿ ಚೇತನ್, ಶಿಕ್ಷಣ ಫೌಂಡೇಷನ್‌ನ ದಿಲೀಪ್ ಅವರುಗಳು ಡಿಜಿಟಲ್ ಸಾಕ್ಷರತೆ, ಮಕ್ಕಳ ಹಕ್ಕು ಮತ್ತು ಕಾರ್ಯಸೂಚಿ ಬಗ್ಗೆ ಮಾಹಿತಿ ನೀಡಿದರು.