ವೀರಾಜಪೇಟೆ, ಅ. ೪: ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗಾಂಧೀಜಿ ಯವರ ೧೫೫ನೇ ಜಯಂತಿಯ ಅಂಗವಾಗಿ ಆಯೋಜಿಸಿದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹುಮಾನ ವಿತರಿಸಿದರು.

ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ವೀರಾಜಪೇಟೆಯ ಸಂತ ಅನ್ನಮ್ಮ ಪ್ರೌಢಶಾಲೆಯ ಚೈತನ್ಯ ಕೆ.ಎಂ. ತೃತೀಯ ಸ್ಥಾನ ಪಡೆದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನವನ್ನು ಸ್ವೀಕರಿಸಿದರು ಚೈತನ್ಯ ೧೦ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು ವೀರಾಜಪೇಟೆಯ ಮಂಜುನಾಥ್ ಮತ್ತು ಕುಮಾರಿ ದಂಪತಿಯ ಪುತ್ರಿ.