ಶನಿವಾರಸಂತೆ, ಅ. ೪: ಪಟ್ಟಣದ ತ್ಯಾಗರಾಜ ಕಾಲೋನಿಯ ಶ್ರೀ ಚಾಮುಂಡೇಶ್ವರಿ ದೇವಿ-ಗುಳಿಗ ದೈವದ ಬನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಶುಕ್ರವಾರ ನವರಾತ್ರಿಯ ದ್ವಿತೀಯ ದಿನ ನವದುರ್ಗೆಯರ ದ್ವಿತೀಯ ಸ್ವರೂಪ ಶ್ರೀ ಬ್ರಹ್ಮಚಾರಿಣಿ ದೇವಿಯ ಆರಾಧನೆ, ಪೂಜಾ ಕೈಂಕರ್ಯ ಶ್ರದ್ಧಾಭಕ್ತಿಯಿಂದ ನೆರವೇರಿತು.

ಅರ್ಚಕ ಪ್ರಕಾಶ್ಚಂದ್ರ ಸುವರ್ಣ ಪೂಜಾ ವಿಧಿ ನೆರವೇರಿಸಿದರು. ಮಹಾ ಮಂಗಳಾರತಿಯಾಗಿ ಶ್ರದ್ಧಾಭಕ್ತಿಯಿಂದ ಪಾಲ್ಗೊಂಡಿದ್ದ ಭಕ್ತರಿಗೆ ತೀರ್ಥ-ಪ್ರಸಾದ ವಿನಿಯೋಗವಾಗಿ ಪೂಜಾ ಕಾರ್ಯ ಸಂಪನ್ನವಾಯಿತು.