ಮಡಿಕೇರಿ, ಅ. ೪: ಮಡಿಕೇರಿ ಹಾಗೂ ಗೋಣಿಕೊಪ್ಪ ದಸರಾ ಆಚರಣೆಗೆ ಹಿಂದೆAದಿಗಿAತಲೂ ಹೆಚ್ಚಿನ ಅನುದಾನವನ್ನು ರಾಜ್ಯ ಸರಕಾರ ಈ ಬಾರಿ ನೀಡಿದ್ದು, ಸಂಭ್ರಮ, ಸಡಗರದೊಂದಿಗೆ ಆರ್ಥಿಕ ಶಿಸ್ತನ್ನು ಪಾಲನೆ ಮಾಡಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಕಾನೂನು ಸಲಹೆಗಾರ, ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಸಲಹೆ ನೀಡಿದರು.
ನಗರದ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಜ್ಯೋತಿ ಬೆಳಗಿಸಿ ಚಾಲನೆ ನೀಡಿ ಮಾತನಾಡಿದ ಅವರು, ಮಡಿಕೇರಿ ದಸರಾ ಜಾಗತಿಕ ಮಟ್ಟದಲ್ಲಿ ಜನಪ್ರಿಯತೆ ಗಳಿಸಿಕೊಂಡಿದೆ. ಜನೋತ್ಸವ ಯಶಸ್ವಿಗೆ ಮಡಿಕೇರಿ ದಸರಾ ಸಮಿತಿ ಹಾಗೂ ದಶಮಂಟಪಗಳು ಪ್ರಮುಖ ಕಾರಣವಾಗಿವೆ. ವರ್ಷದಿಂದ ವರ್ಷಕ್ಕೆ ಕಾರ್ಯಕ್ರಮದ ಜನಪ್ರಿಯತೆ ಹೆಚ್ಚಾಗುತ್ತಿರುವುದು ಜಿಲ್ಲೆಗೆ ಹಿರಿಮೆ ತಂದಿದೆ. ಅದೇ ರೀತಿ ಗೋಣಿಕೊಪ್ಪ ದಸರಾವೂ ಜನಮನ್ನಣೆಗೆ ಪಾತ್ರವಾಗುತ್ತಿದೆ ಎಂದರು.
ಕಳೆದ ವರ್ಷ ಮಡಿಕೇರಿಗೆ ರೂ. ೯೫ ಲಕ್ಷ, ಗೋಣಿಕೊಪ್ಪಕ್ಕೆ ರೂ. ೬೦ ಲಕ್ಷ ಅನುದಾನವನ್ನು ಸರಕಾರ ನೀಡಿತ್ತು. ಈ ಹಣದಲ್ಲಿ ವ್ಯವಸ್ಥಿತವಾಗಿ ದಸರಾ ಆಚರಣೆಯಾಗಿತ್ತು. ಜೊತೆಗೆ ಆರ್ಥಿಕ ಶಿಸ್ತು ಪಾಲನೆ ಮಾಡಲಾಗಿತ್ತು. ಈ ವರ್ಷ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿ ಎಲ್ಲಾ ಅಣೆಕಟ್ಟುಗಳು ತುಂಬಿ ರಾಜ್ಯ ಸಮೃದ್ಧವಾಗಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿಲ್ಲ. ಜೊತೆಗೆ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಮುಖ್ಯಮಂತ್ರಿಗಳಿಗೆ ಒತ್ತಡ ಹಾಕಿದ ಪರಿಣಾಮದಿಂದ ಜಿಲ್ಲೆಯ ದಸರಾ ಆಚರಣೆಗೆ ಅನುದಾನ ಹೆಚ್ಚಿನ ಪ್ರಮಾಣದಲ್ಲಿ ಬಂದಿದೆ ಎಂದರು.
ಜಿಲ್ಲಾಧಿಕಾರಿ, ಮಡಿಕೇರಿ ನಗರ ದಸರಾ ಸಮಿತಿ ಅಧ್ಯಕ್ಷರೂ ಆಗಿರುವ ವೆಂಕಟ್ ರಾಜಾ ಮಾತನಾಡಿ, ಅಪಾರ ಶ್ರಮವಹಿಸಿ ಕಾರ್ಯಕ್ರಮವನ್ನು ರೂಪಿಸಲಾಗಿದೆ. ಇದು ಯಶಸ್ವಿ ಯಾಗಬೇಕಾದರೆ ಜನರ ಸಹಕಾರ ಬಹುಮುಖ್ಯ. ಈ ಬಾರಿ ದಸರಾಕ್ಕೆ ಕಾಫಿ ದಸರಾ, ಮಕ್ಕಳ, ಮಹಿಳಾ, ಯುವ ದಸರಾ, ಜಾನಪದೋತ್ಸವ, ಕಾಫಿಗೋಷ್ಠಿ ಯೊಂದಿಗೆ ಹೆಸರಾಂತ ಕಲಾವಿದರು, ಸ್ಥಳೀಯ ಪ್ರತಿಭಾನ್ವಿತ ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿಬರಲಿವೆ. ಪ್ರತಿಭೆಗಳಿಗೆ ವೇದಿಕೆ ನೀಡುವುದರಿಂದ (ಮೊದಲ ಪುಟದಿಂದ) ಅವರಿಗೆ ಸ್ಫೂರ್ತಿ ಬರುತ್ತದೆ. ಇದರಿಂದ ಸಾಧನೆ ಮಾಡಲು ಸಾಧ್ಯ. ಈ ವರ್ಷ ಕಾವೇರಿ ಆಶೀರ್ವಾದದಿಂದ ಉತ್ತಮ ಮಳೆಯಾಗಿರುವುದರಿಂದ ರಾಜ್ಯದಲ್ಲಿ ನೀರಿನ ಸಮಸ್ಯೆ ಉಂಟಾಗಿಲ್ಲ. ಜಿಲ್ಲೆಯಲ್ಲಿ ಶಾಂತಿ, ನೆಮ್ಮದಿ ನೆಲೆಸಲಿ ಎಂದು ಹಾರೈಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಮಾತನಾಡಿ, ಮಡಿಕೇರಿ ದಸರಾ ಸಾಮರಸ್ಯ, ಸೌಹರ್ದತೆಗೆ ಸಾಕ್ಷಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ದಸರಾ ಸಮಿತಿ ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ ಮಾತನಾಡಿ, ಸರಕಾರ ನೀಡಿದ ಅನುದಾನದಿಂದ ಕಾರ್ಯಕ್ರಮ ಮತ್ತಷ್ಟು ಅದ್ದೂರಿಯಾಗಿ ಮಾಡಲು ಸಾಧ್ಯವಾಯಿತು ಎಂದರು.
ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಎಚ್.ಟಿ. ಅನಿಲ್ ಪ್ರಾಸ್ತಾವಿಕವಾಗಿ ಮಾತನಾಡಿ, ೧೯೬೩ರಲ್ಲಿ ಮೊದಲ ಬಾರಿಗೆ ಮಡಿಕೇರಿ ದಸರಾದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆರಂಭವಾದ ಇತಿಹಾಸವಿದೆ. ಎಂ.ಪಿ. ಮುತ್ತಪ್ಪ, ಜಿ.ಚಿದ್ವಿಲಾಸ್ ಅವರು ನವರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಮುನ್ನುಡಿ ಇಟ್ಟರು. ಕೋವಿಡ್ ಪರಿಸ್ಥಿತಿಯಲ್ಲಿ ಒಮ್ಮೆ ಕಾರ್ಯಕ್ರಮ ನಡೆಯಲಿಲ್ಲ. ದಸರಾ ಜನೋತ್ಸವಕ್ಕೆ ಮಹಿಳಾ, ಮಕ್ಕಳ, ಯುವ ದಸರಾ, ಜಾನಪದೋತ್ಸವ ಹೀಗೆ ಹತ್ತು ಹಲವು ಕಾರ್ಯಕ್ರಮಗಳು ರಂಗು ನೀಡಿವೆ. ಇದೇ ಮೊದಲ ಬಾರಿಗೆ ಕಾಫಿ ದಸರಾ ಎಂಬ ವಿನೂತನ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಉಪ ವಿಭಾಗಾಧಿಕಾರಿ ವಿನಾಯಕ್ ನರ್ವಾಡೆ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ರಾಜ್ಯ ಸರಕಾರದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಮಡಿಕೇರಿ ದಸರಾ ಸಮಿತಿ ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ, ಪ್ರಧಾನ ಕಾರ್ಯದರ್ಶಿ ರಾಜೇಶ್ ಯಲ್ಲಪ್ಪ, ಖಜಾಂಚಿ ಅರುಣ್ ಶೆಟ್ಟಿ, ದಶಮಂಟಪ ಸಮಿತಿ ಅಧ್ಯಕ್ಷ ಜಿ.ಸಿ. ಜಗದೀಶ್, ಖಜಾಂಚಿ
ಮಂಡೀರ ಸದಾ ಮುದ್ದಪ್ಪ, ನಗರಸಭಾ ಸದಸ್ಯರುಗಳಾದ ಕೆ.ಎಸ್. ರಮೇಶ್, ಎಸ್.ಸಿ. ಸತೀಶ್, ಚಂದ್ರಶೇಖರ್, ನೆರವಂಡ ಅನಿತಾ ಪೂವಯ್ಯ, ಸವಿತಾ ರಾಕೇಶ್, ಉಷಾ ಕಾವೇರಪ್ಪ, ಶ್ವೇತಾ ಪ್ರಶಾಂತ್, ಸಬಿತಾ, ಚಿತ್ರಾವತಿ, ಕಲಾವತಿ, ಶಾರದಾ ನಾಗರಾಜ್, ಬಷೀರ್, ಮಂಜುಳಾ, ನಗರಸಭಾ ಮಾಜಿ ಅಧ್ಯಕ್ಷೆ ಜುಲೇಕಾಬಿ ಸೇರಿದಂತೆ ಇನ್ನಿತರರು ಹಾಜರಿದ್ದರು.
ಭಾರತಿ ರಮೇಶ್ ಮತ್ತು ತಂಡ ಪ್ರಾರ್ಥಿಸಿ, ಸ್ನೇಹ ಮಧುಕರ್, ಜೋಂದಮ್ಮ ನಾಡಗೀತೆ ಹಾಡಿದರು. ಮುನೀರ್ ಅಹಮ್ಮದ್ ನಿರೂಪಿಸಿ, ರಾಜೇಶ್ ಯಲ್ಲಪ್ಪ ಸ್ವಾಗತಿಸಿ, ಅರುಣ್ ಶೆಟ್ಟಿ ವಂದಿಸಿದರು.