ಮಡಿಕೇರಿ, ಅ. ೫: ಮಡಿಕೇರಿ ದಸರಾದಲ್ಲಿ ತಾ. ೬ ರಂದು (ಇಂದು) ಬೆಳಿಗ್ಗೆ ೧೦ ಗಂಟೆಗೆ ಕಾಫಿ ದಸರಾ ಎಂಬ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ದೊರಕುತ್ತಿದೆ. ತಾ. ೬ ಮತ್ತು ೭ ರಂದು ಆಯೋಜಿತ ಕಾಫಿ ದಸರಾದಲ್ಲಿ ಕಾಫಿ ಮತ್ತು ಇತರ ಕೃಷಿಗೆ ಸಂಬAಧಿಸಿದAತೆ ಅನೇಕ ಮಾಹಿತಿ ಕೃಷಿಕರಿಗೆ ದೊರಕಲಿದೆ, ಜಿಲ್ಲೆಯ ೧೨ ಮಂದಿ ಸಾಧಕ ಕೃಷಿಕರನ್ನೂ ಕಾಫಿ ದಸರಾ ಸಂದರ್ಭ ಸನ್ಮಾನಿಸಿ ಗೌರವಿಸಲಾಗುತ್ತಿದೆ.

ತಾ. ೬ರಂದು ಬೆಳಿಗ್ಗೆ ೧೦ ಗಂಟೆಗೆ ರಾಜ್ಯ ಕೃಷಿ ಸಚಿವರಾದ ಚೆಲುವರಾಯ ಸ್ವಾಮಿ ಮತ್ತು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಗಾಂಧಿ ಮೈದಾನದಲ್ಲಿ ಕಾಫಿ ದಸರಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಬೆಳಗ್ಗೆ ೧೧ ಗಂಟೆಗೆ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಕಾಫಿ ಮತ್ತು ಕೃಷಿ ಸಂಬAಧಿತ ವಿಚಾರ ಸಂಕಿರಣ ನಡೆಯಲಿದ್ದು, ಸಭಾ ಕಾರ್ಯಕ್ರಮದಲ್ಲಿ ಶಾಸಕರಾದ ಡಾ. ಮಂತರ್‌ಗೌಡ, ಎ.ಎಸ್. ಪೊನ್ನಣ್ಣ, ಸುಜಾಕುಶಾಲಪ್ಪ, ಭೋಜೇಗೌಡ, ಡಾ. ಧನಂಜಯ್ ಸರ್ಜಿ, ಭಾರತೀಯ ಕಾಫಿ ಮಂಡಳಿ ಅಧ್ಯಕ್ಷರಾದ ದಿನೇಶ್ ದೇವವೃಂದ, ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ ಅಧ್ಯಕ್ಷ ಕೆ. ರಾಜೀವ್, ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್ ಅಧ್ಯಕ್ಷ ನಂದಾ ಬೆಳ್ಯಪ್ಪ, ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ.