ವೀರಾಜಪೇಟೆ, ಅ. ೫ : ಅರಮೇರಿ ಶ್ರೀ ಕಳಂಚೇರಿ ಮಠದ ಮಾಸಿಕ ತತ್ವ ಚಿಂತನ ಗೋಷ್ಠಿ ಹೊಂಬೆಳಕು ಕಾರ್ಯಕ್ರಮದ ೨೨೪ನೇ ಕಾರ್ಯಕ್ರಮ ತಾ. ೬ರಂದು (ಇಂದು) ನಡೆಯಲಿದೆ. ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ವಿಭಾಗ ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಸಿದ "ನೈತಿಕತೆಯೇ ಸ್ವಾತಂತ್ರö್ಯ" ಎಂಬ ಶೀರ್ಷಿಕೆಯ ರಾಷ್ಟಿçÃಯ ಅಭಿಯಾನದ ಸಮಾರೋಪ ಕಾರ್ಯಕ್ರಮದ ಅಂಗವಾಗಿ ಮಂಗಳೂರಿನ ಲುಬ್ನಾ ಝಕಿಯಾ ಉಪನ್ಯಾಸ ನೀಡಲಿದ್ದಾರೆ. ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯೆ ಡಾ||.ಹೆಚ್.ಎಂ.ಕಾವೇರಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಪೀಠಾಧಿಪತಿಗಳಾದ ಶ್ರೀಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಗಳು ಆಶೀರ್ವಚನ ನೀಡಲಿದ್ದಾರೆ.