ಕೂಡಿಗೆ, ಅ. ೮: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣ ಘಟಕ, ತಾಲೂಕು ಆರೋಗ್ಯಾಧಿಕಾರಿಗಳ Pಚೇರಿ ಸೋಮವಾರಪೇಟೆ, ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನ ಆಚರಣೆಯನ್ನು ಕೂಡಿಗೆ ವೃದ್ಧಾಶ್ರಮದಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಟಿ. ಗಿರೀಶ್ ನೆರವೇರಿಸಿದರು. ದಿನದ ಮಹತ್ವದ ಬಗ್ಗೆ ಸೋಮವಾರಪೇಟೆ ತಾಲೂಕು ವೈದ್ಯಾಧಿಕಾರಿ ಡಾ. ಇಂದುಧರ್ ನವರು ಮಾತನಾಡಿದರು.

ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಜಯಶ್ರೀ, ಸದಸ್ಯರುಗಳಾದ ಟಿ.ಪಿ. ಹಮೀದ್, ಅನಂತ, ಕೆ.ಎಸ್. ಶಿವಕುಮಾರ್, ಹೆಚ್.ಎಸ್. ರವಿ. ಮೋಹಿನಿ, ಮಂಗಳಾ, ಜಯಶೀಲಾ, ಲಕ್ಷಿö್ಮ, ಚಂದ್ರು, ಜಿಲ್ಲಾ ಶಿಕ್ಷಣಾಧಿಕಾರಿ ಶಾಂತಿ, ಅಭಿವೃದ್ಧಿ ಅಧಿಕಾರಿ ಮಂಜಳಾ, ಆಶ್ರಮ ವ್ಯವಸ್ಥಾಪಕ ಚಂದ್ರು, ಕಾರ್ಯದರ್ಶಿ ಪುನಿತ್ ಹಾಜರಿದ್ದರು. ಆಶ್ರಮದ ಎಲ್ಲಾ ವಯೋವೃದ್ಧರಿಗೆ ಹಣ್ಣು ಹಂಪಲುಗಳನ್ನು ನೀಡಲಾಯಿತು.