ಮಡಿಕೇರಿ, ಅ. ೮: ವಿಶ್ವ ವಿಖ್ಯಾತ ಮೈಸೂರು ದಸರಾ ೨೦೨೪ರ ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಮಡಿಕೇರಿ ಶ್ರೀ ರಾಜೇಶ್ವರಿ ವಿದ್ಯಾಲಯದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾರತೀಯ ಸೈನ್ಯವನ್ನು ಹಾಗೂ ದೇಶಪ್ರೇಮವನ್ನು ಬಿಂಬಿಸುವ ನೃತ್ಯ ಪ್ರದರ್ಶನವನ್ನು ನೀಡಿ, ಯುವ ಸಂಭ್ರಮ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಆಕರ್ಷಕ ಮೆರಗು ನೀಡಿದರು.

ನೃತ್ಯ ಕಲಾವಿದ ನಾಟ್ಯಕಲಾ ನೃತ್ಯ ಶಾಲೆಯ ಅಭಿಷೇಕ್ ಹಾಗೂ ತಂಡದವರು ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿದರು. ಕಾರ್ಯ ಕ್ರಮವು ಮೈಸೂರು ವಿಶ್ವವಿದ್ಯಾನಿಲಯ ಮಾನಸ ಗಂಗೋತ್ರಿ ಆವರಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶ್ರೀ ರಾಜೇಶ್ವರಿ ಎಜುಕೇಶನ್ ಟ್ರಸ್ಟ್ನ ಉಪಾಧ್ಯಕ್ಷೆ ದಾಕ್ಷಾಯಿನಿ ವಾಸುದೇವ್, ಸಂಸ್ಥೆಯ ಕಾರ್ಯದರ್ಶಿ ಸಚಿನ್ ವಾಸುದೇವ್ ಮತ್ತು ಆಡಳಿತ ಮಂಡಳಿ, ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು ಭಾಗಿಯಾಗಿದ್ದರು.