ಮಡಿಕೇರಿ, ಅ. ೧೮: ಪ್ರಸಕ್ತ ಸಾಲಿನ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ (ಪಿಯುಸಿ ಮತ್ತು ಪಿಯುಸಿ ಸಮಾನಾಂತರ ಕೋರ್ಸು, ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತ್ತಿಪರ ಕೋರ್ಸು ಮತ್ತು ಸ್ನಾತಕೋತ್ತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಾತಿಗೆ ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾAಶದ ಆನ್ಲೈನ್” ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ೨೦೨೪-೨೫ನೇ ಸಾಲಿಗೆ ಕೊಡಗು ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯ ಮಡಿಕೇರಿ ಹಾಗೂ ಕುಶಾಲನಗರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗಾಗಿ (ಪಿಯುಸಿ ಮತ್ತು ಪಿಯುಸಿ ಸಮಾನಾಂತರ ಕೋರ್ಸು, ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತ್ತಿಪರ ಕೋರ್ಸು ಮತ್ತು ಸ್ನಾತಕೋತ್ತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾAಶದ hಣಣಠಿs://shಠಿ.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿಯನ್ನು ನವೆಂಬರ್ ೧೧ ರೊಳಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿ ಪಡೆಯ ಬಯಸುವ ಅಭ್ಯರ್ಥಿಗಳು ಜಿಲ್ಲಾ ಅಲ್ಪಸಂಖ್ಯಾತರ ಇಲಾಖಾ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ: ೦೮೨೭೨-೨೨೫೫೨೮/ ೨೨೦೨೧೪, ನಿಲಯಪಾಲಕರು ೯೭೪೨೧೧೬೬೦೧, ೯೯೭೨೧೭೧೨೬೬ ನ್ನು ಸಂಪರ್ಕಿಸಲು ಸೂಚಿಸಿದೆ. ಅರ್ಹ ವಿದ್ಯಾರ್ಥಿಗಳು ಕೂಡಲೇ ಇದರ ಸದುಪಯೋಗಕ್ಕೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್. ಕೃಷ್ಣಮೂರ್ತಿ ಕೋರಿದ್ದಾರೆ.