ಪೆರಾಜೆ, ಅ. ೧೮: ಇಲ್ಲಿಗೆ ಸಮೀಪದ ಕುಂಬಳಚೇರಿ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮದಡಿಯಲ್ಲಿ ಮಾತೃವಂದನಾ ಯೋಜನೆ ಬಗ್ಗೆ ಹಾಗೂ ಪೌಷ್ಟಿಕ ಆಹಾರದ ಪ್ರಾತ್ಯಕ್ಷಿಕೆಯೊಂದಿಗೆ ಅರಿವು ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಆರೋಗ್ಯ ಸುರಕ್ಷಣಾ ಅಧಿಕಾರಿ ಶೈಲಜಾ ಪೌಷ್ಟಿಕ ಆಹಾರ ಹಾಗೂ ಆರೋಗ್ಯ ಸೇರಿದಂತೆ ಇತರ ವಿಚಾರಗಳ ಬಗ್ಗೆ ಮಾಹಿತಿ ನೀಡಿದರು. ಗ್ರಾಮ ಪಂಚಾಯಿತಿ ಸದಸ್ಯ ಉದಯಚಂದ್ರ ಕುಂಬಳಚೇರಿ, ಸಂಪಾಜೆ ಪೆರಾಜೆ ಕ್ಲಸ್ಟರ್ನ ಸಿ.ಆರ್.ಪಿ. ಚಂದ್ರಶೇಖರ್, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಆಶಾ ಕೊಳಂಗಾಯ ಅವರು ಹಿಂದಿನ ಆಹಾರಗಳು ಹಾಗೂ ಪ್ರಸ್ತುತ ದಿನಗಳಲ್ಲಿ ನಾವು ಸೇವಿಸುತ್ತಿರುವ ಆಹಾರಗಳ ಬಗ್ಗೆ ಮಾತನಾಡಿ, ಪೌಷ್ಟಿಕ ಆಹಾರದ ಉಪಯೋಗದ ಬಗ್ಗೆ ತಿಳಿಸಿದರು.
ಅಂಗನವಾಡಿ ಕಾರ್ಯಕರ್ತೆ ಯುವಕಲಾ ಅಂಗನವಾಡಿಯಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ವಿವಿಧ ಪೌಷ್ಟಿಕ ಆಹಾರದ ಪ್ರಾತ್ಯಕ್ಷಿಕೆ ಹಾಗೂ ಅರಿವು ನೀಡಲಾಯಿತು. ಕಾರ್ಯಕ್ರಮವನ್ನು ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಧನ್ಯ ಹೆಚ್.ಸಿ. ಉದ್ಘಾಟಿಸಿದರು. ಶ್ವೇತಾ ಉದಯಚಂದ್ರ ಪ್ರಾರ್ಥಿಸಿ, ಅಂಗನವಾಡಿ ಕಾರ್ಯಕರ್ತೆ ಯುವಕಲಾ ಸ್ವಾಗತಿಸಿ, ವಂದಿಸಿದರು.
ಈ ಸಂದರ್ಭ ಸಂಜೀವಿನಿ ಒಕ್ಕೂಟದ ಎನ್.ಸಿ.ಆರ್.ಪಿ. ಶೀಲಾ ಚಿದಾನಂದ, ಆಶಾ ಕಾರ್ಯಕರ್ತೆ ಹೇಮಲತಾ ಸೇರಿದಂತೆ ಶಾಲಾ ಶಿಕ್ಷಕರು, ಗರ್ಭಿಣಿಯರು, ತಾಯಂದಿರು, ಅಂಗನವಾಡಿ ಸಹಾಯಕಿಯರು, ಪುಟಾಣಿ ಮಕ್ಕಳು ಭಾಗವಹಿಸಿದ್ದರು.