ಮಡಿಕೇರಿ, ಅ. ೧೮: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸೋಮವಾರಪೇಟೆ ಹಾಗೂ ಮಡಿಕೇರಿ ತಾಲೂಕು ಘಟಕದ ಸಹಯೋಗದಲ್ಲಿ ಗಾಂಧಿ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧಿ ಸ್ಮರಣೆ ಮತ್ತು ನವಜೀವನೋತ್ಸವ ಕಾರ್ಯಕ್ರಮ ಕುಶಾಲನಗರದ ಎಪಿಸಿಎಂಎಸ್ ಸಭಾಂಗಣದಲ್ಲಿ ನಡೆಯಿತು.
ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘವು ಸಮಾಜಕ್ಕೆ ಉತ್ತಮವಾದ ಕಾರ್ಯವನ್ನು ಹಮ್ಮಿಕೊಳ್ಳುತ್ತಿದೆ. ಸಮಾಜ ದುಶ್ಚಟಗಳಿಂದ ಮುಕ್ತವಾಗ ಬೇಕಾಗಿದೆ ಎಲ್ಲರೂ ಉತ್ತಮವಾದ ನಡೆನುಡಿಗಳನ್ನು, ಧ್ಯಾನ, ಪೂಜೆ, ಯೋಗಭ್ಯಾಸಗಳನ್ನು ಜೀವನದಲ್ಲಿ ಅಡವಳಿಸಿಕೊಳ್ಳಬೇಕೆಂದರು.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ತಾಲೂಕು ಗ್ಯಾರಂಟಿ ಯೋಜನೆಯ ಅನುಷ್ಠಾನದ ಅಧ್ಯಕ್ಷ ವಿ.ಪಿ. ಶಶಿಧರ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಧ್ಯಕ್ಷ ಅಭಿಮನ್ಯು, ಪೊಲೀಸ್ ಉಪ ಅಧೀಕ್ಷಕ ಗಂಗಾಧರಪ್ಪ, ಸದಸ್ಯರುಗಳಾದ ಚಂದ್ರಮೋಹನ್, ರಾಜಶೇಖರ್, ಸತೀಶ್, ಚಂದ್ರು ಮುಂತಾದವರು ಹಾಜರಿದ್ದರು.