ಅ. ೧೮: ಇಲ್ಲಿನ ಸಂತ ಜೋಸೆಫರ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜನೆ ಗೊಂಡಿದ್ದ ಪ್ರತಿಭಾ ಉತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಂಭ್ರಮದಿAದ ಭಾಗವಹಿಸಿ, ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ಹೆಚ್.ಎನ್. ಅವಿನಾಶ್ ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚಿನ ಶ್ರಮ ಹಾಗೂ ಮುತುವರ್ಜಿ ವಹಿಸಿ ಪಾಠ ಪ್ರವಚನ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿಯೂ ಭಾಗವಹಿಸಿ ತಮ್ಮದೇ ಆದ ಛಾಪನ್ನು ಮೂಡಿಸಬೇಕೆಂದರು.

ಮುಖ್ಯ ಅತಿಥಿಯಾಗಿದ್ದ ಕಸಾಪ ಮಾಜಿ ಅಧ್ಯಕ್ಷ ಜೆ.ಸಿ. ಶೇಖರ್ ಮಾತನಾಡಿ, ವಿದ್ಯಾರ್ಥಿಗಳು ಆತ್ಮವಿಶ್ವಾಸ ಹಾಗೂ ದೃಢ ಸಂಕಲ್ಪದಿAದ ತಮ್ಮಲ್ಲಿರುವ ಪ್ರತಿಭೆ ಯನ್ನು ಅನಾವರಣಗೊಳಿಸಬೇಕು. ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಎ. ಥಾಮಸ್, ಪದವಿ ಕಾಲೇಜಿನ ಪ್ರಾಂಶುಪಾಲ ಬಿ.ಆರ್. ಹರೀಶ್, ಉಪನ್ಯಾಸಕರುಗಳಾದ ಚೈತ್ರ, ಛಾಯಾ, ಜ್ಯೋತಿ, ಸಚಿನ್, ಶೋಭಾ, ನಿಧಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಪ್ರತಿಭಾ ಉತ್ಸವದಲ್ಲಿ ಗ್ರಾಮೀಣ ಸೊಗಡಿನ ಸಂಪ್ರದಾಯ, ಪರಂಪರೆ, ಸಂಸ್ಕೃತಿಯನ್ನು ಬಿಂಬಿಸುವ ಜಾನಪದ ಶೈಲಿಯ ಕಾರ್ಯಕ್ರಮಗಳು ಗಮನ ಸೆಳೆದವು. ಜಾನಪದ ನೃತ್ಯ, ದೇಶಭಕ್ತಿ ಗೀತೆ, ಜಾನಪದ ಹಾಡು ವಿಭಾಗದಲ್ಲಿ ಸ್ಪರ್ಧೆಗಳು ನಡೆದವು.