ಮಡಿಕೇರಿ, ಅ. ೧೮: ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ದಿನಾಂಕ ೦೪-೧೧-೨೦೦೨ ರಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊAಡ ‘ಸಾಂತ್ವನ ಮಹಿಳಾ ಸಹಾಯವಾಣಿ’ ಕೊಡಗಿನಾದ್ಯಂತ ಸಮಾಜದ ನೊಂದ ಮಹಿಳೆಯರು ಪ್ರತಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾದ ಸಲಹೆ ಸೂಚನೆಗಳನ್ನು ನೀಡಿ ನೆರವು ಕಲ್ಪಿಸುತ್ತಾ ಬಂದಿದೆ. ಸಾಂತ್ವನ ಕೇಂದ್ರದಲ್ಲಿ ಈವರೆಗೆ ೫೨೪೮ ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು ೫೨೩೨ ಪ್ರಕರಣಗಳು ಇತ್ಯರ್ಥಗೊಂಡಿರುತ್ತದೆ.
೨೦೨೪-೨೫ನೇ ಆರ್ಥಿಕ ಸಾಲಿನಲ್ಲಿ ಏಪ್ರಿಲ್ ತಿಂಗಳಿನಿAದ ೨೦೨೪ ರ ಏಪ್ರಿಲ್ ೧ ರಿಂದ ಸೆಪ್ಟೆಂಬರ್ ತಿಂಗಳ ಅಂತ್ಯದವರೆಗೆ, ೧೩೦ ಪ್ರಕರಣಗಳು ದಾಖಲಾಗಿ ೧೧೭ ಪ್ರಕರಣಗಳು ಇತ್ಯರ್ಥಗೊಂಡು ಉಳಿದ ೧೩ ಪ್ರಕರಣಗಳು ಇತ್ಯರ್ಥದ ಹಂತದಲ್ಲಿರುತ್ತದೆ. ಹಾಗೆಯೇ ವಿವಿಧ ಸ್ವರೂಪದ ಪ್ರಕರಣಗಳಿಗೆ ಸಂಬAಧಿಸಿದAತೆ ಒಟ್ಟು ರೂ. ೧,೫೫,೦೦೦ ಗಳನ್ನು ಸಾಂತ್ವನ ಕೇಂದ್ರ ಹಾಗೂ ನ್ಯಾಯಾಲಯದ ಮೂಲಕ ಫಲಾನುಭವಿಗಳಿಗೆ ೨೦೨೩-೨೪ನೇ ಸಾಲಿನಲ್ಲಿ ಕೊಡಿಸಿಕೊಡಲಾಗಿದೆ.
ಮಹಿಳಾ ಸಹಾಯವಾಣಿಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಾಂತ್ವನ ಕೇಂದ್ರದ ಅಧ್ಯಕ್ಷ ಕೆ.ಎಸ್. ಪ್ರಕಾಶ್ ಹಾಗೂ ಪ್ರಧಾನ ಕಾರ್ಯದರ್ಶಿ ನಮಿತ ಆರ್. ರೈ ಅವರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ದೂ.ಸಂ. ೯೮೮೦೯೮೫೯೩೯ ನ್ನು ಸಂಪರ್ಕಿಸಬಹುದು ಎಂದು ಸಾಂತ್ವನ ಕೇಂದ್ರದ ಅಧ್ಯಕ್ಷ ಕೆ.ಎಸ್. ಪ್ರಕಾಶ್ ತಿಳಿಸಿದ್ದಾರೆ.