ಕೂಡಿಗೆ, ಅ. ೧೮: ಹೆಬ್ಬಾಲೆ ಗ್ರಾಮ ಪಂಚಾಯಿತಿಯ ೧೫ನೇ ಹಣಕಾಸು ಯೋಜನೆಗೆ ಸಂಬAಧಿಸಿದAತೆ ೨೦೨೪-೨೫ನೇ ಸಾಲಿನ ಕಾಮಗಾರಿಯ ಕ್ರಿಯಾ ಯೋಜನೆಗೆ ಸಂಬAಧಿಸಿದ ಸಭೆ ಅಧ್ಯಕ್ಷೆ ಅರುಣಾ ಕುಮಾರಿ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ೧೫ನೇ ಹಣಕಾಸು ಯೋಜನೆಯ ಕಾಮಗಾರಿಗಳ ಕ್ರಿಯಾ ಯೋಜನೆಯ ಅನುಗುಣವಾಗಿ ಎಲ್ಲಾ ವಾರ್ಡ್ಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರ ಜೊತೆಯಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಸಭೆಯನ್ನು ನಡೆಸಿ ಕಾಮಗಾರಿಯ ಕ್ರಿಯಾ ಯೋಜನೆಯನ್ನು ತಯಾರಿಸಲಾಯಿತು.
ಅರುಣಾಕುಮಾರಿ ಮಾತನಾಡಿ, ಸಭೆಯ ತೀರ್ಮಾನದಂತೆ ಕಾಮಗಾರಿಯನ್ನು ಕೈಗೊಳ್ಳಲು ಎಲ್ಲಾ ಸದಸ್ಯರ ಸಹಕಾರ ಮುಖ್ಯ. ಎಲ್ಲಾ ವಾರ್ಡ್ಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ವಿವಿಧ ಯೋಜನೆಯನ್ನು ರೂಪಿಸಿ ಸದಸ್ಯರ ಸಹಕಾರದೊಂದಿಗೆ ಕಾರ್ಯಗತಗೊಳಿಸಲಾಗುವುದು ಎಂದರು. ಈ ಸಂದರ್ಭ ಉಪಾಧ್ಯಕ್ಷೆ ಲತಾ, ಸೇರಿದಂತೆ ಸರ್ವ ಸದಸ್ಯರು, ಅಭಿವೃದ್ಧಿ ಅಧಿಕಾರಿ ಮಾದಪ್ಪ, ಕಾರ್ಯದರ್ಶಿ ಸುರೇಶ್ ಹಾಜರಿದ್ದರು.