ನಾಪೋಕ್ಲು, ಅ. ೧೮: ಮೂರ್ನಾಡು ಪದವಿಪೂರ್ವ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನಾ ಘಟಕದ ವತಿಯಿಂದ ಕಾಕೋಟುಪರಂಬುವಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿಶೇಷ ವಾರ್ಷಿಕ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ವೀರಾಜಪೇಟೆಯ ವಕೀಲ ಬಿ.ಬಿ. ಮಾದಪ್ಪ ಅವರು ಭಾಗವಹಿಸಿ ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಎಂಬ ವಿಷಯದ ಕುರಿತು ವಿಚಾರ ಮಂಡಿಸಿದರು.

ಶಿಬಿರಾರ್ಥಿಗಳಿಗೆ ಮೊಬೈಲ್ ಬಳಕೆ ಹಾಗೂ ಸಾಮಾಜಿಕ ಜಾಲತಾಣಗಳ ಬಗೆಗಿನ ಕಾನೂನಾತ್ಮಕ ವಿಚಾರವನ್ನು ವಿವರಿಸಿದರು. ಉತ್ತಮ ಸಮಾಜದ ನಿರ್ಮಾಣಕ್ಕೆ ಕಾನೂನಿನ ಅವಶ್ಯಕತೆಯನ್ನು ಶಿಬಿರಾರ್ಥಿಗಳಿಗೆ ವಿವರಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಹಾಕಿ ಕೂರ್ಗ್ನ ಜನರಲ್ ಸೆಕ್ರೆಟರಿ ಅಮ್ಮಂದಿರ ಚೇತನ್, ವಿದ್ಯಾರ್ಥಿಗಳು ದೇಶದ ಭವಿಷ್ಯ. ಆದ್ದರಿಂದ ವಿದ್ಯಾರ್ಥಿ ಜೀವನದಲ್ಲಿ ಆಯ್ಕೆಗಳು ಬಹಳ ಮುಖ್ಯ. ಉತ್ತಮ ಆಯ್ಕೆಗಳ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬಹುದೆಂದು ಹೇಳಿದರು.

ಶಿಬಿರದ ಅಧ್ಯಕ್ಷ ಸ್ಥಾನವನ್ನು ಮೂರ್ನಾಡು ವಿದ್ಯಾಸಂಸ್ಥೆಯ ಉಪಾಧ್ಯಕ್ಷ ರಾಜ ಮಾದಪ್ಪ ಅವರು ವಹಿಸಿದ್ದು, ಎನ್.ಎಸ್.ಎಸ್ ಶಿಬಿರದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರ ಮೂಲಕ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ವೇದಿಕೆಯಲ್ಲಿ ಕಾಕೋಟುಪರಂಬು ಗ್ರಾಮಸ್ಥರಾದ ನೆಲ್ಲಮಕ್ಕಡ ಮುತ್ತಪ್ಪ ಹಾಗೂ ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿಗಳಾದ ದಮಯಂತಿ ಉಪಸ್ಥಿತರಿದ್ದರು.