ಮೈಸೂರಿನ ಮುಡಾ ಕಚೇರಿ ಮೇಲೆ ಇಡಿ ಅಧಿಕಾರಿಗಳ ದಾಳಿ

ಮೈಸೂರು, ಅ. ೧೮: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಅಕ್ರಮ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬAಧಿಸಿದAತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದ್ದು, ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶುಕ್ರವಾರ ಮುಡಾ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಮುಡಾ ಹಗರಣ ಸಂಬAಧ ಸಿದ್ದರಾಮಯ್ಯ ಅವರ ವಿರುದ್ಧ ದಾಖಲಾಗಿದ್ದ ಲೋಕಾಯುಕ್ತ ಎಫ್‌ಐಆರ್ ಅನ್ನು ಆಧರಿಸಿ ಇತ್ತೀಚೆಗೆ ಇಸಿಐಆರ್ ದಾಖಲಿಸಿದ್ದ ಇಡಿ ಅಧಿಕಾರಿಗಳು ಇಂದು ಮೈಸೂರಿನ ಮುಡಾ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಮುಡಾ ಕಚೇರಿಯಲ್ಲಿ ೨೦ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ದಾಖಲೆ ಪರಿಶೀಲಿಸುತ್ತಿದ್ದಾರೆ. ಅಲ್ಲದೆ ಪ್ರಕರಣದ ನಾಲ್ಕನೇ ಆರೋಪಿ ದೇವರಾಜು ಅವರ ಬೆಂಗಳೂರಿನ ಕೆಂಗೇರಿ ನಿವಾಸದ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಸಿಐಆರ್ ಪೊಲೀಸ್ ಎಫ್‌ಐಆರ್‌ಗೆ ಸಮಾನವಾಗಿದೆ. ಇಡಿ ದಾಖಲಿಸಿರುವ ಇಸಿಐಆರ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಪಿ ನಂಬರ್ ೧ (ಎ೧ ಆರೋಪಿ) ಆಗಿದ್ದಾರೆ. ಜೊತೆಗೆ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ, ಅವರ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಜಮೀನು ಮಾರಾಟ ಮಾಡಿದ್ದ ದೇವರಾಜು ಅವರ ವಿರುದ್ಧವೂ ಇಸಿಐಆರ್‌ನಲ್ಲಿ ಆರೋಪಿಗಳೆಂದು ಉಲ್ಲೇಖ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಇಡಿ ಪಿಎಂಎಲ್‌ಎ ಕಾಯ್ದೆಯಡಿ ಇಸಿಐಆರ್ ದಾಖಲಿಸಿದ್ದು, ಇದು ಇತರ ಕೆಲವು ಬಲವಂತದ ಕ್ರಮಗಳ ಜೊತೆಗೆ ಸಿಎಂ ಮತ್ತು ಅವರ ಕುಟುಂಬಕ್ಕೆ ಸೇರಿದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಅವಕಾಶ ಮಾಡಿಕೊಡುತ್ತದೆ. ಅಲ್ಲದೆ ಆರೋಪಿಗಳಿಗೆ ಸಮನ್ಸ್ ನೀಡಿ ವಿಚಾರಣೆಗೆ ಕರೆಯಬಲ್ಲ ಅಧಿಕಾರ ಇಡಿಗೆ ಇದೆ.

ಎರಡು ವರ್ಷಗಳ ಜೈಲುವಾಸದ ನಂತರ ಸತ್ಯೇಂದ್ರ ಜೈನ್‌ಗೆ ಜಾಮೀನು

ನವದೆಹಲಿ, ಅ. ೧೮: ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಜೈಲಿನಲ್ಲಿದ್ದ ದೆಹಲಿಯ ಮಾಜಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ಗೆ ಎರಡು ವರ್ಷಗಳ ನಂತರ ಸ್ಥಳೀಯ ನ್ಯಾಯಾಲಯದಿಂದ ಜಾಮೀನು ಸಿಕ್ಕಿದೆ. ವೈದ್ಯಕೀಯ ಕಾರಣಗಳಿಗಾಗಿ ಮೇ ೨೬, ೨೦೨೩ ರಂದು ಸುಪ್ರೀಂಕೋರ್ಟ್ ಅವರಿಗೆ ಮಧ್ಯಂತರ ಜಾಮೀನು ನೀಡಿತ್ತು. ಈ ವರ್ಷದ ಮಾರ್ಚ್ನಲ್ಲಿ ಜಾಮೀನು ಕೋರಿಕೆಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದ ನಂತರ ಅವರು ತಿಹಾರ್ ಜೈಲಿಗೆ ಮರಳಿದ್ದರು. ಜೈನ್ ಅವರನ್ನು ಮೇ ೩೦, ೨೦೨೨ ರಂದು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಇಂದಿನ ವಿಚಾರಣೆ ವೇಳೆಯಲ್ಲಿ ವಿಳಂಬ ಮತ್ತು ಅವರ ದೀರ್ಘ ಸೆರೆವಾಸವನ್ನು ನ್ಯಾಯಾಲಯ ಉಲ್ಲೇಖಿಸಿದ ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ, ರೂ. ೫೦,೦೦೦ ಬಾಂಡ್ ಮತ್ತು ಅಷ್ಟೇ ಮೊತ್ತದ ಇಬ್ಬರು ಶ್ಯೂರಿಟಿಗಳೊಂದಿಗೆ ಜಾಮೀನು ಮಂಜೂರು ಮಾಡಿದರು. ನಾಲ್ಕು ಕಂಪೆನಿಗಳೊAದಿಗೆ ಅಕ್ರಮವಾಗಿ ಹಣ ಪಡೆದ ಆರೋಪದ ಮೇರೆಗೆ ಮೇ ೩೦, ೨೦೨೨ ರಂದು ಜಾರಿ ನಿರ್ದೇಶನಾಲಯ ಸತ್ಯೇಂದ್ರ ಜೈನ್ ಅವರನ್ನು ಬಂಧಿಸಿತ್ತು. ಭ್ರಷ್ಟಾಚಾರ ತಡೆ ಕಾಯ್ದೆಯಡಿ ೨೦೧೭ರಲ್ಲಿ ಜೈನ್ ವಿರುದ್ಧ ಸಿಬಿಐ ದಾಖಲಿಸಿದ ಎಫ್‌ಐಆರ್ ಆಧಾರದ ಮೇಲೆ ಜೈನ್ ಅವರನ್ನು ಬಂಧಿಸಲಾಗಿತ್ತು. ಸತ್ಯೇಂದ್ರ ಜೈನ್ ಅವರು ಇತ್ತೀಚಿನ ದಿನಗಳಲ್ಲಿ ವಿವಿಧ ಪ್ರಕರಣಗಳಲ್ಲಿ ಜಾಮೀನು ಪಡೆದ ಮೂರನೇ ಎಎಪಿ ನಾಯಕರಾಗಿದ್ದಾರೆ.

ಕೌಶಲ್ಯ ಅಭಿವೃದ್ಧಿ ವಿಶ್ವವಿದ್ಯಾಲಯಕ್ಕೆ ರೂ. ೧೦೦ ಕೋಟಿ ದೇಣಿಗೆ

ಹೈದರಾಬಾದ್, ಅ. ೧೮: ತೆಲಂಗಾಣದಲ್ಲಿ ಕೌಶಲ್ಯ ಅಭಿವೃದ್ಧಿ ವಿಶ್ವವಿದ್ಯಾಲಯ ಸ್ಥಾಪನೆಗಾಗಿ ಗೌತಮ್ ಅದಾನಿ ರೂ. ೧೦೦ ಕೋಟಿ ದೇಣಿಗೆ ನೀಡಿದ್ದಾರೆ. ಯುವಜನರಿಗೆ ಉದ್ಯಮ-ನಿರ್ದಿಷ್ಟ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ನೆರವಾಗುವ ವಿಶ್ವವಿದ್ಯಾಲಯ ಸ್ಥಾಪನೆಗಾಗಿ ಅದಾನಿ ಗ್ರೂಪ್‌ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿರ್ವಹಿಸುತ್ತಿರುವ ಅದಾನಿ ಫೌಂಡೇಶನ್ ತೆಲಂಗಾಣ ಸರ್ಕಾರಕ್ಕೆ ರೂ. ೧೦೦ ಕೋಟಿ ದೇಣಿಗೆ ನೀಡಿದೆ. ಹೈದರಾಬಾದ್‌ನಲ್ಲಿ ಶುಕ್ರವಾರ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರನ್ನು ಭೇಟಿ ಮಾಡಿದ ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ನೇತೃತ್ವದ ನಿಯೋಗ ಚೆಕ್‌ನ್ನು ಹಸ್ತಾಂತರಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ತೆಲಂಗಾಣ ಮುಖ್ಯಮಂತ್ರಿಗಳ ಕಾರ್ಯಾಲಯ, ಯುವ ಭಾರತ ಕೌಶಲ್ಯ ವಿಶ್ವವಿದ್ಯಾಲಯಗಳ ಸ್ಥಾಪನೆಗಾಗಿ ಗೌತಮ್ ಅದಾನಿ ಅವರು ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ರೂ. ೧೦೦ ಕೋಟಿ ಚೆಕ್ ಹಸ್ತಾಂತರಿಸುವುದಾಗಿ ಹೇಳಿದೆ. ಯುವ ಸಬಲೀಕರಣ ಮತ್ತು ಅವರ ಕೌಶಲ್ಯ ಅಭಿವೃದ್ಧಿಗಾಗಿ ತೆಲಂಗಾಣ ಸರ್ಕಾರಕ್ಕೆ ಮತ್ತಷ್ಟು ಬೆಂಬಲ ನೀಡುವುದಾಗಿ ಗೌತಮ್ ಅದಾನಿ ಭರವಸೆ ನೀಡಿರುವುದಾಗಿ ಮುಖ್ಯಮಂತ್ರಿಗಳ ಕಾರ್ಯಾಲಯ ತಿಳಿಸಿದೆ. ಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಹೈದರಾ ಬಾದ್‌ನಲ್ಲಿ ಯುವ ಭಾರತ ಕೌಶಲ್ಯ ವಿಶ್ವವಿದ್ಯಾಲಯ ಸ್ಥಾಪಿಸಲಾಗುತ್ತಿದೆ.

ಹಿಂದೂಗಳ ವಿರುದ್ಧ ಮಾನವ ಹಕ್ಕುಗಳ ಉಲ್ಲಂಘನೆ: ಧಂಕರ್ ಕಿಡಿ!

ನವದೆಹಲಿ, ಅ. ೧೮: ಭಾರತದ ನೆರೆಹೊರೆಯ ರಾಷ್ಟçಗಳಲ್ಲಿ ಹಿಂದೂಗಳ ವಿರುದ್ಧ ಮಾನವ ಹಕ್ಕುಗಳ ಉಲ್ಲಂಘನೆ ವಿರುದ್ಧ ಶುಕ್ರವಾರ ಕಿಡಿಕಾರಿರುವ ಉಪ ರಾಷ್ಟçಪತಿ ಜಗದೀಪ್ ಧಂಕರ್ ಜಾಗತಿಕ ಮೌನವನ್ನು ಪ್ರಶ್ನಿಸಿದ್ದಾರೆ. ಅಂತಹ ಉಲ್ಲಂಘನೆಗಳನ್ನು ಸಹಿಸಿಕೊಳ್ಳುವುದು ಸೂಕ್ತವಲ್ಲ ಎಂದಿದ್ದಾರೆ. ರಾಷ್ಟಿçÃಯ ಮಾನವ ಹಕ್ಕುಗಳ ಆಯೋಗದ ಸಂಸ್ಥಾಪನಾ ದಿನಾಚರಣೆಯನ್ನುದ್ದೇಶಿಸಿ ಮಾತನಾಡಿದ ಅವರು, ನೈತಿಕತೆಯ ಬೋಧಕರು, ಮಾನವ ಹಕ್ಕುಗಳ ಪಾಲಕರು ಎಂದು ಕರೆದುಕೊಳ್ಳುವವರ ಮೌನವನ್ನು ಪ್ರಶ್ನಿಸಿದರು. ಅವರು ಸಂಪೂರ್ಣವಾಗಿ ಮಾನವ ಹಕ್ಕುಗಳಿಗೆ ವಿರುದ್ಧವಾಗಿ ಕೆಲಸ ಮಾಡುವವರು ಎಂದು ಟೀಕಿಸಿದರು. ನಾವು ತುಂಬಾ ಸಹಿಷ್ಣುಗಳು ಮತ್ತು ಅಂತಹ ಮಾನವ ಹಕ್ಕುಗಳ ಉಲ್ಲಂಘನೆ ತುಂಬಾ ಸಹಿಷ್ಣುರಾಗಿರುವುದು ಸೂಕ್ತವಲ್ಲ ಎಂದು ಅವರು ಹೇಳಿದರು. ನೀವು ಅಂತಹವರಲ್ಲಿ ಒಬ್ಬರಾಗಿದ್ದಲ್ಲಿ ಯೋಚಿಸಿ ಎಂದು ಅಲ್ಲಿದ್ದ ಜನರಿಗೆ ಹೇಳಿದರು. ಇಂತಹ ಬರ್ಬರತೆ, ಕಿರುಕುಳ, ಅನುಭವ ಹೊಂದಿರುವ ಬಾಲಕ, ಬಾಲಕಿಯರು, ಮಹಿಳೆಯರನ್ನು ನೋಡಿ, ಧ್ವಂಸವಾಗುತ್ತಿರುವ ನಮ್ಮ ದೇವಾಲಯಗಳ ಕಡೆಗೆ ಗಮನ ಹರಿಸಿ ಎಂದು ಹೇಳಿದರು. ಆದರೆ, ಯಾವುದೇ ದೇಶದ ಹೆಸರನ್ನು ಅವರು ಹೇಳಲಿಲ್ಲ.