ಕೂಡಿಗೆ, ಅ. ೧೮: ಕೂಡಿಗೆ, ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಕೆಲವು ದಿನಗಳಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಅನೇಕ ರೈತರ ಜಮೀನಿಗೆ ಮಳೆಯ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಅಲ್ಲದೆ ತಗ್ಗು ಪ್ರದೇಶದ ಮನೆಗಳಿಗೆ ಮಳೆಯ ನೀರು ನುಗ್ಗಿ ಅಪಾರ ಪ್ರಮಾಣದ ಗೃಹೋಪಯೋಗಿ ವಸ್ತುಗಳು, ದಿನಸಿ ವಸ್ತುಗಳು ಹಾಳಾಗಿರುವ ಹಿನ್ನೆಲೆಯಲ್ಲಿ ಸಂಬAಧಿಸಿದ ಇಲಾಖೆಯವರು ಪರಿಹಾರವನ್ನು ನೀಡುವಂತೆ ಈ ವ್ಯಾಪ್ತಿಯ ರೈತರು ಒತ್ತಾಯಿಸಿದ್ದಾರೆ.
ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀಗೆಹೊಸೂರು, ಭುವನಗಿರಿ, ಬ್ಯಾಡಗೊಟ್ಟ, ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡೈರಿ ಸರ್ಕಲ್ ಸೇರಿದಂತೆ ಹಾನಿಯಾದ ಪ್ರದೇಶಗಳಿಗೆ ಸಂಬAಧಿಸಿದ ಅಧಿಕಾರಿ ವರ್ಗದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಹಾರವನ್ನು ನೀಡುವಂತೆ ರೈತರುಗಳಾದ ದೇವಯ್ಯ, ಮಹದೇವ, ಲೋಕೇಶ್ ಶೇಖರ್, ಸಂತೋಷ್, ಚಿಣ್ಣಪ್ಪ, ನಾಗರಾಜ ಮತ್ತಿತರರು ಆಗ್ರಹಿಸಿದ್ದಾರೆ.