ಕೂಡಿಗೆ, ಅ. ೧೮: ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರಿಗೆ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ನೀಡಲ್ಪಡುವ ಕೃಷಿಗೆ ಸಂಬAಧಿಸಿದ ಯಂತ್ರೋಪಕರಣಗಳು ಮತ್ತು ಕೊಳವೆ ಬಾವಿಗೆ ಸಂಬAಧಿಸಿದ ನೀರೆತ್ತುವ ಯಂತ್ರೋಪಕರಣಗಳನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ವಿತರಣೆ ಮಾಡಿದರು.
ಗ್ರಾಮೀಣ ಪ್ರದೇಶದ ರೈತರಿಗೆ ವಿವಿಧ ಇಲಾಖೆಯ ಮೂಲಕ ಸರಕಾರ ರಿಯಾಯಿತಿ ದರದಲ್ಲಿ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಇದರ ಸದುಪಯೋಗವನ್ನು ರೈತರು ಪಡೆದುಕೊಂಡು ಆರ್ಥಿಕವಾಗಿ ಮುಂದುವರೆಯಬೇಕು ಎಂದು ಶಾಸಕರು ಹೇಳಿದರು.
ಈ ಸಂದರ್ಭ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಕೆ.ಪಿ.ಸಿ.ಸಿ. ಸದಸ್ಯ ನಟೇಶ್ ಗೌಡ, ಹೆಬ್ಬಾಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅರುಣಾಕುಮಾರಿ, ಹೆಬ್ಬಾಲೆ ನೀರು ಬಳಕೆದಾರರ ಸಹಕಾರ ಸಂಘದ ಅಧ್ಯಕ್ಷ ಹೆಚ್.ಟಿ. ದಿನೇಶ್, ಗ್ರಾಮ ಪಂಚಾಯಿತಿ ಸದಸ್ಯರು, ವಿವಿಧ ಘಟಕದ ಪದಾಧಿಕಾರಿಗಳು, ಇಲಾಖೆಯ ಅಧಿಕಾರಿ ವರ್ಗದವರು ಹಾಗೂ ರೈತರು ಹಾಜರಿದ್ದರು.