ಮಡಿಕೇರಿ, ಅ. ೧೮: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಕೊಡಗು ಜಿಲ್ಲಾ ಸಂಸ್ಥೆ ವತಿಯಿಂದ ಆಹಾರ ಸಂರಕ್ಷಣಾ ಜಾಗೃತಿ ಅಭಿಯಾನ, ಕೊಡಗು ಜಿಲ್ಲೆಯ ಸಂಯುಕ್ತ ಆಶ್ರಯದಲ್ಲಿ ನಗರದ ಪೊನ್ನಮ್ಮ ಕುಶಾಲಪ್ಪ ಸ್ಕೌಟ್ಸ್ ಮತ್ತು ಗೈಡ್ಸ್ ಭವನದ ಸಭಾಂಗಣದಲ್ಲಿ ಬುಧವಾರ "ಉತ್ತಮ ಜೀವನ ಮತ್ತು ಉತ್ತಮ ಭವಿಷ್ಯಕ್ಕಾಗಿ ಆಹಾರದ ಹಕ್ಕು" ಎನ್ನುವ ಧ್ಯೇಯದೊಂದಿಗೆ ವಿಶ್ವ ಆಹಾರ ದಿನಾಚರಣೆ ನಡೆಯಿತು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕೊಡಗು ಘಟಕದ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯೂ, ಆಹಾರದ ಕೊರತೆಯಿಂದ ಉಲ್ಬಣಿಸಿರುವ ಹಸಿವಿನ ಜಾಗತಿಕ ಸಮಸ್ಯೆ ನಿವಾರಿಸುವಲ್ಲಿ ಪ್ರತಿಯೊಬ್ಬರೂ ಸಂಕಲ್ಪ ತೊಡಬೇಕು ಎಂದರು.
ಆಹಾರ ಪೋಲು-ರಾಷ್ಟಿçÃಯ ನಷ್ಟ, ನಾವು ನಮ್ಮ ನೆಲೆಯಲ್ಲಿ ಆಹಾರ ವ್ಯರ್ಥವಾಗುವುದನ್ನು ತಡೆಯುವ ಪ್ರಯತ್ನ ಮತ್ತು ಸಮಾಜಮುಖಿ ಚಿಂತನೆಯ ಮೂಲಕ ಆಹಾರ ಸಂರಕ್ಷಣೆ ಕುರಿತು ಹೆಚ್ಚಿನ ಜಾಗೃತಿ ಅಭಿಯಾನ ಹಮ್ಮಿಕೊಳ್ಳುವ ಮೂಲಕ ಆಹಾರ ಅಪವ್ಯಯವನ್ನು ತಡೆಗಟ್ಟಲು ಸಂಘಟಿತ ಪ್ರಯತ್ನ ನಡೆಸಬೇಕು ಎಂದರು.
ವಿಶ್ವ ಆಹಾರ ದಿನದ ಮಹತ್ವದ ಕುರಿತು ಮಾಹಿತಿ ನೀಡಿ ಆಹಾರ ಸಂರಕ್ಷಣೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದ ಸಂಸ್ಥೆಯ ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿ ಟಿ.ಜಿ. ಪ್ರೇಮಕುಮಾರ್, ಆಹಾರದ ಕೊರತೆಯಿಂದ ಉಲ್ಬಣಿಸಿರುವ ಹಸಿವು ಎಂಬುದು ಇಂದು ಜಾಗತಿಕ ಸಮಸ್ಯೆಯಾಗಿದೆ. ಈ ಜಾಗತಿಕ ಹಸಿವು ನಿವಾರಣೆಗೆ ಎಲ್ಲರೂ ಕೈಜೋಡಿಸಬೇಕು ಎಂದರು.
ಕುಶಾಲನಗರದಲ್ಲಿ ಎನ್.ಕೆ. ಮೋಹನ್ ಕುಮಾರ್ ನೇತೃತ್ವದಲ್ಲಿ ೧೫ ವರ್ಷಗಳ ಹಿಂದೆ ಆರಂಭಗೊAಡ ಆಹಾರ ಸಂರಕ್ಷಣಾ ಜನಜಾಗೃತಿ ಅಭಿಯಾನವು ಇಂದು ಬೆಂಗಳೂರು ಮತ್ತಿತರ ಕಡೆಗಳಲ್ಲಿ ವಿಸ್ತೃತಗೊಂಡು ಆಹಾರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಪ್ರೇಮಕುಮಾರ್ ತಿಳಿಸಿದರು.
ಜಿಲ್ಲಾ ಸ್ಕೌಟ್ಸ್ ವಿಭಾಗದ ಆಯುಕ್ತ ಜಿಮ್ಮಿ ಸಿಕ್ವೇರಾ ಮಾತನಾಡಿ, ಪ್ರತಿಯೊಬ್ಬರೂ ಆಹಾರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು. ಜಿಲ್ಲಾ ಗೈಡ್ಸ್ ಸಂಸ್ಥೆಯ ಆಯುಕ್ತೆಯೂ ಆಗಿರುವ ಪದ್ಮಶ್ರೀ ಪುರಸ್ಕೃತರಾದ ರಾಣಿ ಮಾಚಯ್ಯ, ಸ್ಥಾನೀಕ ಆಯುಕ್ತ ಹೆಚ್.ಆರ್. ಮುತ್ತಪ್ಪ, ಸಂಸ್ಥೆಯ ಸಹ ಕಾರ್ಯದರ್ಶಿಗಳಾದ ಬೊಳ್ಳಜೀರ ಬಿ. ಅಯ್ಯಪ್ಪ, ಈರಮಂಡ ಹರಿಣಿ ವಿಜಯ್, ಜಿಲ್ಲಾ ಗೈಡ್ಸ್ನ ಸಹಾಯಕ ಆಯುಕ್ತೆ ಸಿ.ಎಂ. ಸುಲೋಚನ, ಸ್ಕೌಟ್ಸ್ನ ತರಬೇತಿ ಆಯುಕ್ತ ಕೆ.ಯು. ರಂಜಿತ್, ಗೈಡ್ಸ್ನ ತರಬೇತಿ ಆಯುಕ್ತೆ ಮೈಥಿಲಿರಾವ್, ಸ್ಕೌಟ್ಸ್ ತರಬೇತಿ ಆಯುಕ್ತ ಕೆ.ಯು. ರಂಜಿತ್, ಗೈಡ್ಸ್ ತರಬೇತಿ ಆಯುಕ್ತೆ ಮೈಥಿಲಿರಾವ್, ಜಿಲ್ಲಾ ಸಂಘಟಕಿ ಯು.ಸಿ. ದಮಯಂತಿ, ತರಬೇತಿ ಸಹಾಯಕ ಆಯುಕ್ತೆ ಅಲೀಮ, ಕಬ್ಸ್ ವಿಭಾಗದ ಮುಖ್ಯಸ್ಥೆ ಡೈಸಿ, ಸಂಸ್ಥೆಯ ದಳ ನಾಯಕಿ ಗಾಯನ ಇದ್ದರು.