ಮಡಿಕೇರಿ, ಅ. ೧೯: ಮೈಸೂರು ಕಾಫಿ ಸಂಸ್ಕರಣಾ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆ ತಾ. ೩೦ ರಂದು ಮೈಸೂರಿನ ಯಾದವಗಿರಿಯಲ್ಲಿರುವ ಸಂಘದ ಕಚೇರಿ ಆವರಣದಲ್ಲಿ ನಡೆಯಲಿದೆ.
ತಾ. ೧೫ ರಿಂದ ನಾಮಪತ್ರಗಳನ್ನು ಸಲ್ಲಿಕೆ ಆರಂಭಗೊAಡಿದ್ದು, ತಾ. ೨೨ ರಂದು ಮಧ್ಯಾಹ್ನ ೩ ಗಂಟೆಗೆ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ. ತಾ. ೨೩ ರಂದು ನಾಮಪತ್ರಗಳ ಪರಿಶೀಲನೆ. ೨೪ ರಂದು ಅಪರಾಹ್ನ ೩ ಗಂಟೆಯೊಳಗೆ ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ೩೦ ರಂದು ಬೆಳಿಗ್ಗೆ ೯ ಗಂಟೆಯಿAದ ಅಪರಾಹ್ನ೪ ಗಂಟೆಯವರೆಗೆ ಮತದಾನ ನಡೆಯಲಿದೆ.