ಕೂಡಿಗೆ, ಅ. ೨೨: ಕುಶಾಲನಗರ ಕನ್ನಡ ಸಿರಿ ಸ್ನೇಹ ಬಳಗ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಕೂಡಿಗೆ ಇವರ ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಕಿತ್ತೂರು ರಾಣಿ ಚೆನ್ನಮ್ಮ ದಿನಾಚರಣೆ ಅಂಗವಾಗಿ ತಾ.೨೩ ರಂದು (ಇಂದು) ಮಾತು- ಮಾಧುರ್ಯ ಎಂಬ ಕಾರ್ಯಾಗಾರವು ಕೂಡಿಗೆಯ ಜಿಲ್ಲಾ ಶಿಕ್ಷಣ ತರಬೇತಿ ಕೇಂದ್ರದ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ತರಬೇತಿ ಕೇಂದ್ರದ ಉಪ ನಿರ್ದೇಶಕ ಎಂ. ಚಂದ್ರಕಾAತ್ ನೆರವೇರಿಸಲಿದ್ದಾರೆ. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ನಿವೃತ್ತ ಕಲಾ ಶಿಕ್ಷಕ ಉ.ರಾ. ನಾಗೇಶ್, ಶನಿವಾರಸಂತೆ ವಿಘ್ನೇಶ್ವರ ಬಾಲಿಕ ಪ್ರೌಢಶಾಲೆಯ ಶಿಕ್ಷಕ ಕೆ.ಪಿ. ಜಯಕುಮಾರ್ ಕೂಡಿಗೆ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಕೆ.ಶಾಂತಕುಮಾರ್ ಅಗಮಿಸಲಿದ್ದಾರೆ ಎಂದು ಕನ್ನಡ ಸಿರಿ ಸ್ನೇಹ ಬಳಗದ ಅಧ್ಯಕ್ಷ ಬಿ. ಎಸ್ .ಲೋಕೇಶ್ ಸಾಗರ್ ತಿಳಿಸಿದ್ದಾರೆ.