ನಾಪೋಕ್ಲು, ಅ. ೨೨: ಅಪ್ರಾಪ್ತ ಬಾಲಕಿಗೆ ನವಜಾತ ಶಿಶುವೊಂದು ಜನಿಸಿ ಬಳಿಕ ಶಿಶು ಕಾಣೆಯಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬAಧಿಸಿದAತೆ ನಾಪೊಕ್ಲು ಪೊಲೀಸ್ ಠಾಣೆಯಲ್ಲಿ ಸೋಮವಾರ ಸಂಜೆ ಪ್ರಕರಣ ದಾಖಲಾಗಿದೆ.
ಸ್ಥಳೀಯ ಗ್ರಾಮ ಪಂಚಾಯಿತಿಗೆ ಒಳಪಟ್ಟ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರವಾಗಿದೆ ಎಂದು ಆರೋಪಿಸಿ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ದೂರು ದಾಖಲಾಗಿ ಗ್ರಾಮದ ಬಾಲಕನೊಬ್ಬನ ಮೇಲೆ ಪೋಕ್ಸೋ ಕೇಸ್ ದಾಖಲಾಗಿತ್ತು. ಬಳಿಕ ಬಾಲಕ ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದ. ನಂತರ ಪ್ರಕರಣ ಕೋರ್ಟ್ ಮೆಟ್ಟಿಲೇರಿದ್ದು ಅಲ್ಲಿ ನ್ಯಾಯಾಧೀಶರ ಆದೇಶದಂತೆ ವೈದ್ಯಾಧಿಕಾರಿಗಳಿಂದ ಪರೀಕ್ಷೆ ನಡೆಸಿ ಬಾಲಕಿ ಗರ್ಭಿಣಿ ಎಂದು ದೃಢಪಡಿಸಲಾಗಿತ್ತು. ನಂತರ ತಾ. ೧೭ರಂದು ಬಾಲಕಿ ಶಿಶುವಿಗೆ ಜನ್ಮ ನೀಡಿದ್ದು ಶಿಶುವನ್ನು ಕಾಣದಂತೆ ಮಾಡಲಾಗಿದೆ ಎನ್ನಲಾಗಿದೆ. ಅಸ್ವಸ್ಥಗೊಂಡ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬAಧ ಸೋಮವಾರ ಸಂಜೆ ಆರೋಗ್ಯ ಕಾರ್ಯಕರ್ತೆಯೊಬ್ಬರು ಸ್ಥಳೀಯ ಪೊಲೀಸರಿಗೆ ಲಿಖಿತ ದೂರನ್ನು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.