ಮಡಿಕೇರಿ, ಅ. ೨೨: ಕೊಡಗು ಜಿಲ್ಲಾ ವ್ಯಾಪಿ ಕರ್ನಾಟಕ ಭೂಸುಧಾರಣಾ ಕಾಯ್ದೆ ತಿದ್ದುಪಡಿ ೭೯ಎ, ೭೯ಬಿಯನ್ನು ದುರು ಪಯೋಗಪಡಿಸಿಕೊಂಡು ನಡೆಸುತ್ತಿ ರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ತಾ.೨೩ರಂದು (ಇಂದು) ಬೆಳಿಗ್ಗೆ ೧೦.೩೦ ಗಂಟೆಗೆ ಭಾಗಮಂಡಲದಲ್ಲಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು. ನಾಚಪ್ಪ ತಿಳಿಸಿದ್ದಾರೆ.
ಕಾವೇರಿಯ ಪುಣ್ಯ ಸ್ಥಳವು ಸುಪ್ರಸಿದ್ಧ ತೀರ್ಥಯಾತ್ರ ಕ್ಷೇತ್ರವಾಗಿದ್ದು, ಇದು ಪ್ರವಾಸಿತಾಣವಾಗುವ ಬದಲು ಆಧ್ಯಾತ್ಮಿಕ, ಪರಮಾರ್ಥಿಕ ನೆಲೆಯಾಗಿ ಉಳಿದು ಮುಂದುವರೆಯಬೇಕು. ಭೂಸುಧಾರಣಾ ತಿದ್ದುಪಡಿ ಕಾಯ್ದೆ ದುರ್ಬಳಕೆಯಾಗದಂತೆ ಸಾತ್ವಿಕ ಪ್ರತಿರೋಧವನ್ನು ಸಿಎನ್ಸಿ ಒಡ್ಡುತ್ತಾ ಬಂದಿದೆ. ಇದರ ಭಾಗವಾಗಿ ಬುಧವಾರ ಭಾಗಮಂಡಲದಲ್ಲಿ ಸಿಎನ್ಸಿ ಯಿಂದ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ.