ಶನಿವಾರಸಂತೆ, ಅ. ೨೨: ಅಖಿಲ ಭಾರತ ವೀರಶೈವ ಮಹಾಸಭಾ ಕರ್ನಾಟಕ ರಾಜ್ಯ ಘಟಕದ ಉಪಾಧ್ಯಕ್ಷರಾಗಿ ಕೊಡ್ಲಿಪೇಟೆಯ ರಾಜೇಶ್ವರಿ ನಾಗರಾಜ್ ಅವರನ್ನು ಆಯ್ಕೆ ಮಾಡಲಾಗಿದೆ. ರಾಜೇಶ್ವರಿಯವರು ಈ ಹಿಂದೆ ೫ ವರ್ಷಗಳು ರಾಷ್ಟಿçÃಯ ಮಹಿಳಾ ಘಟಕದ ಕಾರ್ಯದರ್ಶಿಯಾಗಿ, ನಂತರ ೫ ವರ್ಷಗಳು ರಾಜ್ಯ ಘಟಕದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದು; ಪ್ರಸ್ತುತ ಮುಂದಿನ ೫ ವರ್ಷಗಳ ಅವಧಿಗೆ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ರಾಜ್ಯ ಘಟಕದ ಪ್ರಥಮ ಕಾರ್ಯನಿರ್ವಾಹಕ ಸಮಿತಿ ಸಭೆಯಲ್ಲಿ ರಾಜ್ಯಧ್ಯಕ್ಷ ಶಂಕರ ಮಹಾದೇವ ಬಿದರಿ ಅವರು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಮಾಡಿದ್ದು; ಕೊಡಗು ಜಿಲ್ಲೆಯ ರಾಜೇಶ್ವರಿ ನಾಗರಾಜ್ ಅವರನ್ನು ಉಪಾಧ್ಯಕ್ಷರಾಗಿ ಆಯ್ಕೆ ಮಾಡಿ ಘೊಷಿಸಿರುವುದಾಗಿ ಪ್ರಕಟಣೆ ತಿಳಿಸಿದೆ.