x
ಕೂಡಿಗೆ, ಅ. ೨೨ : ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಗೋ ಸದನ ಮತ್ತು ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರದ ಜಾಗವು ಸೋಮವಾರಪೇಟೆ ತಾಲೂಕು ಸಾಮಾಜಿಕ ಅರಣ್ಯ ಇಲಾಖೆಯ ಹೆಸರಿಗೆ ನೋಂದಣಿಯಾ ಗಿರುವ ವಿಷಯವಾಗಿ ಕುಶಾಲನಗರದ ಪೊಲೀಸ್ ವಿಶ್ರಾಂತಿ ಗೃಹದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಕೂಡಿಗೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಆಡಳಿತ ಮಂಡಳಿಯ ಸದಸ್ಯರ ಮತ್ತು ಹುದುಗೂರು ಗ್ರಾಮಸ್ಥರ ಮನವಿಯ ಮೇರೆಗೆ ಎರಡೂ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು, ಕೂಡಿಗೆ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ, ಹುದುಗೂರು ಗ್ರಾಮಸ್ಥರ ಸಮ್ಮುಖದಲ್ಲಿ ಪಶುಪಾಲನಾ ಇಲಾಖೆಗೆ ಕಾಯ್ದಿರಿಸಿದ ಜಾಗವು ಸಾಮಾಜಿಕ ಅರಣ್ಯ ಇಲಾಖೆಯ ಹೆಸರಿಗೆ ಕಂದಾಯ ಇಲಾಖೆಯ ಮುಖೇನ ಖಾತೆಯಾಗಿರುವ ಬಗ್ಗೆ ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳು ಮತ್ತು ಗ್ರಾಮಸ್ಥರುÀ ಶಾಸಕ ಮಂತರ್ ಗೌಡ ಅವರಿಗೆ ಸಮಗ್ರ ಮಾಹಿತಿ ನೀಡಿದರು.
ಸಾಮಾಜಿಕ ಅರಣ್ಯ ಇಲಾಖೆಯ ವತಿಯಿಂದ ಬೆಳೆಯುತ್ತಿರುವ ಗಿಡಗಳ ಮಾಹಿತಿ, ಜಾಗದ ವಿವರ, ಅಲ್ಲದೇ ಪಶುಪಾಲನಾ ಇಲಾಖೆಗೆ ಬೇಕಾಗುವ ಜಾಗದ ಬಗ್ಗೆ ಮಾಹಿತಿಯನ್ನು ಪಡೆದ ಶಾಸಕರು ಮುಂದಿನ ದಿನಗಳಲ್ಲಿ ಸಾಮಾಜಿಕ ಅರಣ್ಯ ಇಲಾಖೆಯ ಸಿ.ಸಿ.ಎಫ್. ಅವರ ಸಮ್ಮುಖದಲ್ಲಿ ಗ್ರಾಮಸ್ಥರು, ಅಧಿಕಾರಿಗಳ ಉಪಸ್ಥಿತಿಯಲ್ಲಿ ಶಾಶ್ವತ ಪರಿಹಾರವನ್ನು ಕಂಡುಕೊಳ್ಳುವ ಬಗ್ಗೆ ಸಭೆ ನಡೆಸಿ ಚರ್ಚಿಸಲು ಮುಂದಿನ ದಿನಾಂಕವನ್ನು ನಿಗದಿ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಕುಶಾಲನಗರ ತಹಶೀಲ್ದಾರ್ ಕಿರಣ್ ಗೌರಯ್ಯ, ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಟಿ. ಗಿರೀಶ್, ಸೋಮವಾರಪೇಟೆ ತಾಲೂಕು ಸಾಮಾಜಿಕ ಅರಣ್ಯ ಇಲಾಖೆ ಪ್ರಭಾರ ವಲಯ ಅರಣ್ಯಾಧಿಕಾರಿ ಭವ್ಯ, ಪಶುಪಾಲನಾ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಡಾ. ಲಿಂಗರಾಜ್ ದೊಡ್ಡಮುನಿ, ತಾಲೂಕು ಪಶುವೈದ್ಯಾಧಿಕಾರಿ ಡಾ. ರಾಜಶೇಖರ್ ಮೂಡಭಾಗಿ, ಕುಶಾಲನಗರ ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಗೋವಿಂದಪ್ಪ, ಕೂಡಿಗೆ ಗ್ರಾಮ ಪಂಚಾಯಿತಿ ಸದಸ್ಯರಾದ ಹೆಚ್.ಎಸ್. ರವಿ, ರತ್ನಮ್ಮ, ಟಿ.ಪಿ. ಹಮೀದ್ ಹುದುಗೂರು ಉಮಾಮಹೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಟಿ.ಎಂ. ಚಾಮಿ, ಗ್ರಾಮದ ಹಿತರಕ್ಷಣಾ ಸಮಿತಿ ಅಧ್ಯಕ್ಷ ಗಿರೀಶ್, ಹಾರಂಗಿ ನೀರು ಬಳಕೆದಾರ ಸಂಘದ ಮಾಜಿ ಅಧ್ಯಕ್ಷ ಐ.ಎಸ್. ಗಣೇಶ್ ಗ್ರಾಮದ ಪ್ರಮುಖರಾದ ಗಣೇಶ್, ಚಿಣ್ಣಪ್ಪ, ಟಿ.ಎಂ. ರವಿ. ಉಮಾ ಪ್ರಭಾಕರ್, ಸಮನ್, ಸುರೇಶ್, ಅಶೋಕ್ ಸೇರಿದಂತೆ ಗ್ರಾಮದ ಅನೇಕ ರೈತ ಮುಖಂಡರು, ಅಧಿಕಾರಿ ವರ್ಗದವರು ಹಾಜರಿದ್ದರು. ಕಂದಾಯ ಪರಿವೀಕ್ಷಕ ಸಂತೋಷ್ ಸ್ವಾಗತಿಸಿ, ವಂದಿಸಿದರು.