ಚೆಯ್ಯಂಡಾಣೆ, ಅ. ೨೩: ಇತಿಹಾಸ ಪ್ರಸಿದ್ಧ ಕಕ್ಕಬ್ಬೆ ಕುಂಜಿಲ ಗ್ರಾಮದ ಪೈನರಿ ದರ್ಗಾದಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಔಲಿಯಾಗಳ ಹೆಸರಿನಲ್ಲಿ ಪ್ರತಿವರ್ಷ ಆಚರಿಸಿಕೊಂಡು ಬರುತ್ತಿರುವ ಉರೂಸ್ ಸಮಾರಂಭವು ೨೦೨೫ರ ಫೆ.೭ರಿಂದ ೧೧ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಕುಂಜಿಲ ಪೈನರಿ ಸುನ್ನಿ ಮುಸ್ಲಿಂ ಜಮಾಅತ್ ಅಧ್ಯಕ್ಷರು, ಆಡಳಿತ ಮಂಡಳಿ, ಸಲಹಾ ಸಮಿತಿ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.