ಸೋಮವಾರಪೇಟೆ, ಅ. ೩೦: ಕನ್ನಡ ಸಾಹಿತ್ಯ ಪರಿಷತ್‌ನ ಸೋಮವಾರಪೇಟೆ ಕಸಬಾ ಹೋಬಳಿ ಘಟಕದ ವತಿಯಿಂದ ನವೆಂಬರ್ ೧ ರಂದು ಕನ್ನಡ ರಾಜ್ಯೋತ್ಸವ ಆಚರಿಸಲು ತೀರ್ಮಾನಿಸಲಾಗಿದ್ದು, ಪರಿಷತ್‌ನ ಐಗೂರಿನ ಕಚೇರಿಯಲ್ಲಿ ಬೆಳಿಗ್ಗೆ ೯ಕ್ಕೆ ಹೋಬಳಿ ಘಟಕದ ಅಧ್ಯಕ್ಷ ನಂಗಾರು ಕೀರ್ತಿ ಪ್ರಸಾದ್ ಧ್ವಜಾರೋಹಣ ನೆರವೇರಿಸಲಿದ್ದಾರೆ.

ನಂತರ ನಡೆಯುವ ಸಭಾ ಕಾರ್ಯಕ್ರಮವನ್ನು ಐಗೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪೂರ್ಣಕುಮಾರ್ ಉದ್ಘಾಟಿಸಲಿದ್ದಾರೆ. ಮುಖ್ಯ ಭಾಷಣಕಾರರಾಗಿ ಪರಿಷತ್‌ನ ಸದಸ್ಯ ಶಾಫಿ ಸಹದಿ ಪಾಲ್ಗೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಿ.ಕೆ. ವಿನೋದ್, ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಹೆಚ್.ಕೆ. ಉಮೇಶ್ ಕುಮಾರ್, ಪ್ರೌಢಶಾಲಾ ಮುಖ್ಯ ಶಿಕ್ಷಕ ಎಂ.ಎA. ಯಶ್ವಂತ್ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಎಂ.ಟಿ. ಸರಳಕುಮಾರಿ ಭಾಗವಹಿಸಲಿದ್ದಾರೆ ಎಂದು ಪರಿಷತ್ ಗೌರವ ಕಾರ್ಯದರ್ಶಿ ವಿಶ್ವನಾಥ ರಾಜೇ ಅರಸ್ ತಿಳಿಸಿದ್ದಾರೆ.