ಮಡಿಕೇರಿ, ಅ. ೩೦ : ಭೂ-ರಾಜಕೀಯ ಸ್ವಾಯತ್ತತೆಗಾಗಿ ಕೊಡವ ಕ್ವೆಸ್ಟ್ನ ಕಾನೂನುಬದ್ಧ ಆಕಾಂಕ್ಷೆಗಳನ್ನು ಪರಿಹರಿಸಲು ೨ ನೇ ರಾಜ್ಯಗಳ ಮರು-ಸಂಘಟನೆ ಆಯೋಗವನ್ನು ರಚಿಸಬೇಕೆಂದು ಆಗ್ರಹಿಸಿ ಕೊಡವ ನ್ಯಾಷನಲ್ ಕೌಲ್ಸಿಲ್ ವತಿಯಿಂದ ನ.೧ ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.

ಬೆಳಿಗ್ಗೆ ೧೦.೩೦ ಗಂಟೆಯಿAದ ೧೧.೩೦ ಗಂಟೆಯವರೆಗೆ ಧರಣಿ ನಡೆಸಿ ಹಿರಿಯ ಆರ್ಥಿಕ ತಜ್ಞ, ಕೇಂದ್ರದ ಮಾಜಿ ಕಾನೂನು ಸಚಿವ ಡಾ. ಸುಬ್ರಮಣಿಯನ್ ಸ್ವಾಮಿ ಅವರು ಪ್ರತಿಪಾದಿಸಿರುವ ೨ನೇ ರಾಜ್ಯಗಳ ಮರು-ಸಂಘಟನೆಯ ಆಯೋಗ ರಚನೆಗಾಗಿ ಆಗ್ರಹಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.