ಕೂಡಿಗೆ, ಅ. ೩೦: ಕೂಡಿಗೆಯ ಕೃಷಿ ಕ್ಷೇತ್ರದ ಆವರಣದಲ್ಲಿರುವ ಸರಕಾರಿ ಪದವಿಪೂರ್ವ ಕಾಲೇಜಿನ ಹೆಚ್ಚುವರಿ ಕಟ್ಟಡದ ನಿರ್ಮಾಣ ಕಾಮಗಾರಿ ಈಗಾಗಲೇ ಪೂರ್ಣಗೊಂಡು ಉದ್ಘಾಟನೆಗೆ ಸಿದ್ಧಗೊಂಡಿದೆ.

೨೦೨೨-೨೩ನೇ ಸಾಲಿನ ವಿವೇಕ ಯೋಜನೆ ಅಡಿಯಲ್ಲಿ ಹೆಚ್ಚುವರಿ ೫ ಕೊಠಡಿಗಳು ರೂ. ೭೫ ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿದೆ.