ಮಡಿಕೇರಿ, ಅ. ೩೦: ಕರ್ನಾಟಕ ಲೋಕಾಯುಕ್ತ ಕೊಡಗು ಜಿಲ್ಲೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮೂರ್ನಾಡು ಗ್ರಾಮ ಪಂಚಾಯಿತಿಯ ಸಹಕಾರದೊಂದಿಗೆ ಮೂರ್ನಾಡು ಸಮುದಾಯ ಭವನದಲ್ಲಿ `ರಾಷ್ಟçದ ಏಳಿಗೆಗೆ ಸಮಗ್ರತೆಯ ಸಂಸ್ಕೃತಿ’ ಎಂಬ ಶೀರ್ಷಿಕೆ ಅಡಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮವು ನೆರವೇರಿತು. ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಶುಭ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಲೋಕಾಯುಕ್ತ ಉಪ ಅಧೀಕ್ಷಕ ಅಧಿಕಾರಿ ಕೆ.ಸಿ. ಪ್ರಕಾಶ್, ಉಪನಿರ್ದೇಶಕ ನಟರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಬಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್, ಮೂರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ವಿಜಯಕುಮಾರ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿಯನ್ನು ತೆಗೆದುಕೊಳ್ಳಲಾಯಿತು.

ಶಾಸ್ತಿçನಗರ ಮತ್ತು ಕಬಡಕೇರಿ ಅಂಗನವಾಡಿ ಕೇಂದ್ರಗಳಿಗೆ ನ್ಯಾಯಾಧೀಶರು ಮತ್ತು ಲೋಕಾಯುಕ್ತರು ಭೇಟಿ ನೀಡಿ ಪರಿಶೀಲಿಸಿದರು.